ಹುಬ್ಬಳ್ಳಿ: ‘ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಆಗಸ್ಟ್ 22ರ ಒಳಗೆ 2(ಎ) ಮೀಸಲಾತಿ ಕಲ್ಪಿಸಬೇಕು. ಇಲ್ಲದಿದ್ದರೆ ಆಗಸ್ಟ್ 23ರಂದು ಶಿಗ್ಗಾವಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಪಂಚ ಮಸಾಲಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಎಚ್ಚರಿಸಿದರು.
ಲಿಂಗಾಯತ ಪಂಚಮಸಾಲಿ ಸಮಾಜ ದಿಂದ ಶನಿವಾರ ಹುಬ್ಬಳ್ಳಿಯಲ್ಲಿ ನಡೆದ ಹಕ್ಕೊತ್ತಾಯ ರ‍್ಯಾಲಿ ಮತ್ತು ಧರಣಿಯಲ್ಲಿ ಅವರು ಮಾತನಾಡಿದರು.
‘ಮೀಸಲಾತಿ ಕಲ್ಪಿಸಿದರೆ ಮುಖ್ಯಮಂತ್ರಿಗೆ ಸನ್ಮಾನ ಮಾಡಲಾಗುವುದು. ಇಲ್ಲದಿದ್ದರೆ ಅವಮಾನ ಮಾಡಲೂ ಹಿಂಜರಿಯುವುದಿಲ್ಲ. ಇದು ಕೊನೆಯ ಹಂತದ ಮಾಡು ಇಲ್ಲವೆ ಮಡಿ ಹೋರಾಟ’ ಎಂದರು. ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ‘ಪಂಚಮಸಾಲಿ ಸಮಾಜದ ಬೆಂಬಲ ಇಲ್ಲದೆ ಯಾವ ಪಕ್ಷಗಳೂ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ. ಮೀಸಲಾತಿ ಕಲ್ಪಿಸುವವರಿಗೆ 2023ರ ಚುನಾವಣೆಯಲ್ಲಿ ನಮ್ಮ ಸಹಕಾರ ಇರುತ್ತದೆ’ ಎಂದು ಹೇಳಿದರು.
‘ಮುಖ್ಯಮಂತ್ರಿ ಅವರು ಕೊಟ್ಟ ಮಾತು ಉಳಿಸಿಕೊಳ್ಳುವ ವಿಶ್ವಾಸವಿದೆ. ಮೀಸಲಾತಿ ನೀಡಿದರೆ ಅವರಿಗೆ ಕಲ್ಲುಸಕ್ಕರೆಯ ತುಲಾಭಾರ ಮಾಡಲಾ ಗುವುದು. ಮಾತು ತಪ್ಪಿದರೆ ಉಗ್ರ ಹೋರಾಟ ಎದುರಿಸಬೇಕಾ
ಗುತ್ತದೆ’ ಎಂದು ಎಚ್ಚರಿಸಿದರು.