Breaking News

ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ: ಎಡಿಜಿಪಿ ಅಲೋಕ್‌ ಕುಮಾರ್‌

Spread the love

ಬೆಂಗಳೂರು: ಪ್ರಚೋದನಕಾರಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗಿದೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಕೆಲವರು ಸಾಮಾಜಿಕ ಮಾಧ್ಯಮದಲ್ಲಿ ಕಾನೂನು ಸುವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡುತ್ತಿರುವುದನ್ನು ಗಮನಿಸಲಾಗಿದೆ. ನಾವು ಅಂತಹ ಪೋಸ್ಟ್‌ಗಳನ್ನು ಪರಿಶೀಲಿಸುತ್ತಿದ್ದೇವೆ.

ಅಲ್ಲದೇ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳುತ್ತೇವೆ. ಪ್ರಚೋದನಕಾರಿ ಭಾಷಣ ಮಾಡಿದ ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಎಡಿಜಿಪಿ ಮಾಹಿತಿ ನೀಡಿದ್ದಾರೆ.

ಕಾಳಿ ಸ್ವಾಮಿಗೆ ಕಾನೂನು ಕಂಟಕ ಎದುರಾಗಿದೆ. ಹಿಂದೂಗಳ ಒಂದು ತಲೆಗೆ ಮುಸ್ಲಿಮರ 10 ತಲೆ ತೆಗೀಬೇಕು ಅಂತಾ ಟೌನ್‌ಹಾಲ್‌ನಲ್ಲಿ ಕಾಳಿ ಸ್ವಾಮಿ ಹೇಳಿಕೆ ನೀಡಿದ್ದರು.

ಇದಲ್ಲದೆ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಪ್ರಚೋದನಕಾರಿ ಹೇಳಿಕೆ, ಬರಹ ಪೋಸ್ಟ್‌ ಮಾಡಿದ್ದರು. ಅಂತಹವರ ಮೇಲೂ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.

 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ