Breaking News

ಉದಯವಾಣಿ ಸಂಸ್ಥಾಪಕ ಮೋಹನ್​ ದಾಸ್ ಪೈ ಅವರು ನಿಧನ

Spread the love

ಬೆಂಗಳೂರು/ಉಡುಪಿ: ಮಣಿಪಾಲದ ಶಿಲ್ಪಿ ಡಾ. ಟಿ ಎಮ್ ಎ ಪೈ ಅವರ ಹಿರಿಯ ಪುತ್ರ ಹಾಗೂ ಉದಯವಾಣಿ ಸಂಸ್ಥಾಪಕ ಟಿ ಮೋಹನ್ ದಾಸ್ ಎಂ ಪೈ (89) ಮಣಿಪಾಲದ ಕೆ ಎಂ ಸಿ ಆಸ್ಪತ್ರೆಯಲ್ಲಿ ಭಾನುವಾರ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದಾಗಿ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಇವರು ಡಾ ಟಿ ಎಂ ಎ ಪೈ ಫೌಂಡೇಶನ್, ಎಂಜಿಎಂ ಕಾಲೇಜ್ ಟ್ರಸ್ಟ್​ನ ಅಧ್ಯಕ್ಷರಾಗಿದ್ದರು. ಮೃತರು ತಮ್ಮಂದಿರಾದ ಡಾಟಿ.ರಾಮದಾಸ್ ಪೈ, ಟಿ.ನಾರಾಯಣ ಪೈ, ಟಿ.ಅಶೋಕ್ ಪೈ, ತಂಗಿಯರಾದ ವಸಂತಿ ಆರ್. ಶೆಣೈ, ಜಯಂತಿ ಪೈ, ಇಂದುಮತಿ ಪೈ, ಆಶಾ ಪೈ, ಸಹೋದರ ಟಿ.ಸತೀಶ್ ಯು. ಪೈ ಅವರನ್ನು ಅಗಲಿದ್ದಾರೆ. ಎಂಜಿಎಂ ಕಾಲೇಜಿನಲ್ಲಿ ಇಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮೋಹನ್ ದಾಸ್ ಪೈ ನಿಧನ ಹಿನ್ನೆಲೆಯಲ್ಲಿ ಇಂದು ಡಾ.ಟಿ ಎಂ ಎ ಪೈ ಫೌಂಡೇಶನ್​​ನ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ