Breaking News

ಸಿದ್ದರಾಮಯ್ಯ-75 ‘ಅಮೃತ ಮಹೋತ್ಸವ’ ನಾಳೆ, 10 ಲಕ್ಷ ಜನರು ಸೇರುವ ನಿರೀಕ್ಷೆ

Spread the love

ಬೆಂಗಳೂರು: ದಾವಣಗೆರೆಯಲ್ಲಿ ಬುಧವಾರ (ಆಗಸ್ಟ್ 3) ನಡೆಯಲಿರುವ ಸಿದ್ದರಾಮಯ್ಯ-75 ‘ಅಮೃತ ಮಹೋತ್ಸವ’ ಸಂಭ್ರಮಕ್ಕೆ ಅಮೃತ ಮಹೋತ್ಸವ ಸಮಿತಿ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಈ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನಸಾಗರ ಹರಿದು ಬರಬಹುದೆಂಬ ನಿರೀಕ್ಷೆ ಸಮಿತಿಯದ್ದಾಗಿದೆ.

 

ಸಮಾವೇಶದ ನೆಪದಲ್ಲಿ ಸಿದ್ದರಾಮಯ್ಯ ಅವರ ಆಡಳಿತ ಅವಧಿಯ ಜನಪರ ಯೋಜನೆಗಳನ್ನು ನೆನಪಿಸುತ್ತಲೇ, ಕೇಂದ್ರ- ರಾಜ್ಯ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಲು ಸಿದ್ಧತೆ ನಡೆದಿದೆ. ಕಾರ್ಯಕ್ರಮದ ಅಂತಿಮ ರೂಪರೇಷೆಗಳ ಕುರಿತು ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಮಿತಿ ಪದಾಧಿಕಾರಿಗಳಾದ ಆರ್‌.ವಿ. ದೇಶಪಾಂಡೆ, ಬಸವರಾಜ ರಾಯರಡ್ಡಿ, ಈಶ್ವರ ಖಂಡ್ರೆ, ಎಚ್.ಎಂ. ರೇವಣ್ಣ, ಬಿ.ಎಲ್. ಶಂಕರ್, ವಿ.ಆರ್. ಸುದರ್ಶನ್, ಅಜಯ್ ಸಿಂಗ್ ಮತ್ತಿತರರು ಚರ್ಚೆ ನಡೆಸಿದರು.

ಸಿದ್ದರಾಮಯ್ಯ ಅವರು ಮಂಗಳವಾರ ಮಧ್ಯಾಹ್ನವೇ ಹುಬ್ಬಳ್ಳಿಗೆ ತೆರಳಲಿದ್ದು, ರಾತ್ರಿ 8 ಗಂಟೆಗೆ ಎಐಸಿಸಿ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ಅವರ ಎಂಟು ವರ್ಷಗಳ ಆಡಳಿತದಲ್ಲಿನ ವೈಫಲ್ಯಗಳ ಕುರಿತು ಕಾಂಗ್ರೆಸ್ ಇತ್ತೀಚೆಗೆ ಬಿಡುಗಡೆ ಮಾಡಿದ್ದ ‘ವರುಷ ಎಂಟು ಅವಾಂತರ ನೂರೆಂಟು’ ಕಿರು ಹೊತ್ತಿಗೆಯನ್ನು ಮರುಮುದ್ರಿಸಿ ಅಮೃತ ಮಹೋತ್ಸವ ಹಂಚಲು ಸಮಿತಿ ಮುಂದಾಗಿದೆ. ಹೀಗಾಗಿ, ಎರಡು ಲಕ್ಷಕ್ಕೂ ಹೆಚ್ಚು ಪ್ರತಿಗಳನ್ನು ಮರುಮುದ್ರಿಸಲಾಗಿದೆ’ ಎಂದು ಸಮಿತಿಯ ಮೂಲಗಳು ತಿಳಿಸಿವೆ.

10 ಲಕ್ಷ ಜನರು ಸೇರುವ ನಿರೀಕ್ಷೆ


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ