Breaking News

ಗುಜರಾತ್​ನಲ್ಲಿ ಅಧಿಕಾರಕ್ಕೆ ಬಂದ್ರೆ ನಿರುದ್ಯೋಗಿಗಳಿಗೆ ತಿಂಗಳಿಗೆ ₹3 ಸಾವಿರ: ಕೇಜ್ರಿವಾಲ್ ಆಫರ್‌

Spread the love

(ಗುಜರಾತ್​​): ಪಂಜಾಬ್ ರಾಜ್ಯ ಗೆಲ್ಲುವಲ್ಲಿ ಯಶಸ್ವಿಯಾಗಿರುವ ಆಮ್​ ಆದ್ಮಿ ಪಕ್ಷ(ಎಎಪಿ) ಇದೀಗ ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯ ಗುಜರಾತ್​ ಮೇಲೆ ಕಣ್ಣಿಟ್ಟಿದೆ. ಈ ವರ್ಷಾಂತ್ಯದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಈಗಿನಿಂದಲೇ ಆಪ್ ಮುಖ್ಯಸ್ಥ ಕೇಜ್ರಿವಾಲ್ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.

ವೆರಾವಲ್​ನಲ್ಲಿ ಆಯೋಜನೆಗೊಂಡಿದ್ದ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, “ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ನಿರುದ್ಯೋಗಿ ಯುವಕನಿಗೂ ಮಾಸಿಕ 3 ಸಾವಿರ ರೂಪಾಯಿ ನಿರುದ್ಯೋಗ ಭತ್ಯೆ ಹಾಗೂ ಪ್ರತಿಯೊಬ್ಬರಿಗೂ ಉದ್ಯೋಗ ನೀಡಲಾಗುವುದು” ಎಂದು ಭರ್ಜರಿ ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ, ವರ್ಷದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಮಾಡುವ ಸಾಮರ್ಥ್ಯ ನಮ್ಮ ಪಕ್ಷಕ್ಕಿದೆ ಎಂದು ಹೇಳಿದರು.

ಕಳೆದ ಕೆಲವು ದಿನಗಳ ಹಿಂದೆ ಗುಜರಾತ್‌ ಭೇಟಿಯ ಸಂದರ್ಭದಲ್ಲಿ ಮಾತನಾಡಿದ್ದ ಕೇಜ್ರಿವಾಲ್‌, ರಾಜ್ಯದಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ತಿಂಗಳಿಗೆ 300 ಯೂನಿಟ್‌ವರೆಗೆ ಉಚಿತ ವಿದ್ಯುತ್​ ನೀಡುವುದಾಗಿ ಭರವಸೆ ನೀಡಿದ್ದರು. ಈ ಬೆನ್ನಲ್ಲೇ ಇದೀಗ ನಿರುದ್ಯೋಗಿ ಯುವಕರಿಗೆ ಹೊಸ ಆಫರ್ ಕೊಟ್ಟಿದ್ದಾರೆ.


Spread the love

About Laxminews 24x7

Check Also

ಗೃಹ ಸಚಿವರೇ ಅಸಹಾಯಕರಾಗಿದ್ದಾರೆ: ಅಕ್ರಮ ಮರಳು ಸಾಗಣೆಗೆ ಹೈಕೋರ್ಟ್ ತೀವ್ರ ಕಳವಳ, ಸರ್ಕಾರಕ್ಕೆ ನೋಟಿಸ್

Spread the loveಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಸಾಗಣೆ ಪ್ರಕರಣಗಳ ಬಗ್ಗೆ ಕರ್ನಾಟಕ ಹೈಕೋರ್ಟ್  ಗಂಭೀರ ಕಳವಳ ವ್ಯಕ್ತಪಡಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ