Breaking News

‘ಸಿದ್ದರಾಮಯ್ಯ’ ಜೀವನಾಧಾರಿತ ಚಲನಚಿತ್ರ ನಿರ್ಮಿಸಲು ಮುಂದಾದ ಉದ್ಯಮಿ

Spread the love

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 75 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ದಾವಣಗೆರೆಯಲ್ಲಿ ಇಂದು ಅದ್ದೂರಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಇದರಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಮಂದಿ ಪಾಲ್ಗೊಳ್ಳಲಿದ್ದು, ಇದಕ್ಕಾಗಿ ಸಕಲ ಸಿದ್ಧತೆಯನ್ನೂ ಮಾಡಲಾಗಿದೆ.

 

ದಾವಣಗೆರೆಯ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಬೃಹತ್ ಪೆಂಡಾಲ್ ಹಾಕಲಾಗಿದ್ದು, 6 ಲಕ್ಷಕ್ಕೂ ಅಧಿಕ ಮಂದಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ವೇದಿಕೆಯಲ್ಲಿ 150 ಗಣ್ಯರು ಕುಳಿತುಕೊಳ್ಳಲು ಸಜ್ಜುಗೊಳಿಸಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗಾಗಲೇ ರಾಜ್ಯಕ್ಕೆ ಆಗಮಿಸಿದ್ದು, ಇಂದಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದರ ಮಧ್ಯೆ ಸಿದ್ದರಾಮಯ್ಯನವರ ಜೀವನಾಧಾರಿತ ಚಲನಚಿತ್ರವನ್ನು ವಿವಿಧ ಭಾಷೆಗಳಲ್ಲಿ ನಿರ್ಮಿಸಲು ತೆಲಂಗಾಣದ ಉದ್ಯಮಿ ನಂಬರ್ ಒನ್ ಶ್ರೀಧರ್ ಮುಂದೆ ಬಂದಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಮಂಗಳವಾರದಂದು ಮಾಹಿತಿ ನೀಡಿರುವ ಅವರು, ಅಭಿಮಾನಿಗಳ ಜೊತೆಗೆ ಸೇರಿ ಈ ಚಿತ್ರ ನಿರ್ಮಾಣ ಮಾಡುವ ಉದ್ದೇಶವಿದೆ. ಈ ಕುರಿತು ಸಿದ್ದರಾಮಯ್ಯ ಅವರೊಂದಿಗೆ ಈಗಾಗಲೇ ಚರ್ಚೆ ಮಾಡಿರುವುದಾಗಿಯೂ ತಿಳಿಸಿದರು.


Spread the love

About Laxminews 24x7

Check Also

ಮೂಡಲಗಿ ವಲಯದ ಅತಿಥಿ ಶಿಕ್ಷಕರ ವೇತನ ವಿತರಿಸಿದ ಸರ್ವೋತ್ತಮ ಜಾರಕಿಹೊಳಿ*

Spread the love ಗೋಕಾಕ-* ಧಾರವಾಡ ವಲಯದಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯದ ಸಾಧನೆಯನ್ನು ಮೆಚ್ಚುವಂತಹದ್ದು, ಅದರಲ್ಲಿಯೂ ಅತಿಥಿ ಶಿಕ್ಷಕರನ್ನು ಇಟ್ಟುಕೊಂಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ