ಬೆಂಗಳೂರು: ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯಲ್ಲಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬಿದ್ದ ಘಟನೆ ನಾಗರಭಾವಿ-ಬೆಂಗಳೂರು ಯೂನಿವರ್ಸಿಟಿ ರಸ್ತೆಯಲ್ಲಿ ನಡೆದಿದೆ.

ಕಾರಿನ ಬಾನೆಟ್ ಮೇಲೆ ಮರ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಘಟನೆ ಬೆನ್ನಲ್ಲೇ ಸ್ಥಳಕ್ಕೆ ಭೇಟಿ ನೀಡಿದ ಬ್ಯಾಟರಾಯನಪುರ ಸಂಚಾರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪೊಲೀಸರೇ ಕರೆ ಮಾಡಿದರೂ ಘಟನಾ ಸ್ಥಳಕ್ಕೆ ಬರಲು ಬಿಬಿಎಂಪಿ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ.

ಸುಮಾರು ನಾಲ್ಕು ಗಂಟೆಯ ಬಳಿಕ ಬಿಬಿಎಂಪಿ ಸಿಬ್ಬಂದಿ ಘಟನಾ ಸ್ಥಳಕ್ಕೆ ಬಂದರು. ಘಟನೆ ನಡೆದಿದ್ದು ರಾತ್ರಿ 9.30ರ ಸುಮಾರಿಗೆ. ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಟ್ರಾಫಿಕ್ ಸಿಬ್ಬಂದಿ ಬಿಬಿಎಂಪಿಗೆ ಮಾಹಿತಿ ನೀಡಿದರು. ಆದ್ರೆ ನಾಲ್ಕು ಗಂಟೆ ಘಟನಾ ಸ್ಥಳಕ್ಕೆ ಬಾರದೆ ಬಿಬಿಎಂಪಿ ಸಿಬ್ಬಂದಿ ಮತ್ತು ಅಧಿಕಾರಿಗಳು ಬೇಜವಬ್ದಾರಿ ಮೆರೆದಿದ್ದಾರೆ.
Laxmi News 24×7