ಕುಡಿದ ಅಮಲಿನಲ್ಲಿ ಬಾವಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕೋಡಿ ಪಟ್ಟಣದ ಹಾಲಟ್ಟಿಯಲ್ಲಿ ನಡೆದಿದೆ…
ಗೌಸಮೋದಿನ ಮುಸ್ತಫಾ ಜಮಾದಾರ (35) ಆತ್ಮಹತ್ಯೆಯನ್ನು ಮಾಡಿಕೊಂಡ ಯುವಕ.ಕುಡಿದ ಅಮಲಿನಲ್ಲಿ ನಿನ್ನೆ ರಾತ್ರಿ ಮನೆಯಲ್ಲಿ ಜಗಳವಾಡಿ ಮನೆಯಿಂದ ಹೋರಗೆ ಹೋಗಿ,ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾನೆ.ಯುವಕ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿಯುತ್ತಿದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ರಾತ್ರಿಯಿಂದ ಅಗ್ನಿಶಾಮಕದಳ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದರು.ಇವತ್ತು ಬೆಳಗ್ಗೆಯಿಂದ ಪುರಸಭೆ ಪೌರಕಾರ್ಮಿಕರು ಹಾಗೂ ಅಗ್ನಿಶಾಮಕದಳದಿಂದ ಕಾರ್ಯಾಚರಣೆಯನ್ನು ನಡೆಸಿ ಶವವನ್ನು ಪತ್ತೆಹಚ್ಚಿ ಹೋರಗೆ ತಗೆದಿದ್ದಾರೆ.ಘಟನಾ ಸ್ಥಳಕ್ಕೆ ಪಿಎಸ್ಐ ಯಮನಪ್ಪ ಮಾಂಗ ಭೇಟಿಯನ್ನು ನೀಡಿದ್ದಾರೆ.
ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.ಚಿಕ್ಕೋಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.