ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಕಾಂಗ್ರೆಸ್ ಮುಖಂಡರಿಗೆ ಬಿಬಿಎಂಪಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಪಾಲಿಕೆಯಿಂದ ಅನುಮತಿ ಪಡೆಯದೆ ಬೃಹತ್ ಬ್ಯಾನರ್ ಅಳವಡಿಸಿದ್ದವರ ವಿರುದ್ಧ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.
ವಸಂತನಗರ ಉಪ ವಿಭಾಗ ಪಾಲಿಕೆ ಸಹಾಯಕ ಕಂದಾಯ ಅಧಿಕಾರಿ ಬಿ.ವಿ. ವೀಣಾ, ದೂರು ನೀಡಿದ್ದಾರೆ. ಇದರ ಮೇರೆಗೆ ಕಾಂಗ್ರೆಸ್ ಮುಖಂಡರಾದ ಟಿ.ಎಸ್. ರಮೇಶ್ ಬಾಬು ಮತ್ತು ಜಯಬಾಲ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಗರದ ಚಾಲುಕ್ಯ ಜಂಕ್ಷನ್‌ನಲ್ಲಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಸಲುವಾಗಿ ಬೃಹತ್ ಬ್ಯಾನರ್ ಅಳವಡಿಸಲಾಗಿದೆ. ಪಾಲಿಕೆಯಿಂದ ಅನುಮತಿ ಪಡೆದಿಲ್ಲ. ಇದರಿಂದ ಬೆಂಗಳೂರು ನಗರ ಸೌಂದರ್ಯಕ್ಕೆ ಧಕ್ಕೆ ಉಂಟಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Laxmi News 24×7