Breaking News

ರಸ್ತೆ ಬದಿ ಕಟ್ಟಡ ನಿರ್ಮಾಣಕ್ಕೆ ಅಂಕುಶ: ಸಚಿವ ಸಿ.ಸಿ.ಪಾಟೀಲ್‌

Spread the love

ಗದಗ: ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯರಸ್ತೆಗಳ ಅಕ್ಕಪಕ್ಕ ಅನ ಧಿಕೃತ ಕಟ್ಟಡಗಳನ್ನು ನಿರ್ಮಿಸದಂತೆ ತಡೆಗಟ್ಟಲು ಲೋಕೋಪಯೋಗಿ ಇಲಾಖೆ ಯಿಂದ ಸ್ಪಷ್ಟ ನಿಯಮ ಜಾರಿಗೆ ತರಲಾಗಿದೆ ಎಂದು ಸಚಿವ ಸಿ.ಸಿ.ಪಾಟೀಲ್‌ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟನೆ ನೀಡಿರುವ ಅವರು, ಹೆದ್ದಾರಿಗಳ ಅಕ್ಕಪಕ್ಕ ಕಟ್ಟಡ ನಿರ್ಮಾಣದಲ್ಲಿ ಕನಿಷ್ಠ ಎಷ್ಟು ಪ್ರಮಾಣದ ಅಂತರ ಕಾಯ್ದುಕೊಳ್ಳಬೇಕೆಂಬ ವಿವರ ಗಳನ್ನೂ ನೀಡಿದ್ದಾರೆ.

ಈ ನಿಯಮದನ್ವಯ ರಾಜ್ಯ ಹೆದ್ದಾರಿಗಳ ಮಧ್ಯಭಾಗದಿಂದ 40 ಮೀ. ಅಂತರದವರೆಗೆ ಯಾವುದೇ ಕಟ್ಟಡ ಅಥವಾ ಅಂಗಡಿ ನಿರ್ಮಿಸುವಂತಿಲ್ಲ. ಜಿಲ್ಲಾ ಮುಖ್ಯರಸ್ತೆಗಳ ಮಧ್ಯಭಾಗದಿಂದ 25 ಮೀ. ಅಂತರದವರೆಗೆ ಯಾವುದೇ ಕಟ್ಟಡ ನಿರ್ಮಿಸುವಂತಿಲ್ಲ. ಸಿಟಿ ಕಾರ್ಪೊರೇಷನ್‌ ಪರಿಮಿತಿಯಿಂದ 15 ಕಿ.ಮೀ. ದೂರದವರೆಗೆ 12 ಮೀಟರ್‌ ಅಂತರ ಪಾಲಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ