Breaking News

ಬೆಳಗಾವಿ ನಗರದಲ್ಲಿ ಭಾರಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

Spread the love

ಬೆಳಗಾವಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ ಬಳಿಕ ನಗರ ಪೊಲೀಸರು ಎಚ್ಚೆತ್ತುಕೊಂಡಿದ್ದು ಮುಂಜಾನೆ 8 ಗಂಟೆಯಿಂದ ಮಧ್ಯಾಹ್ನ 11 ಗಂಟೆವರೆಗೆ ಯಾವುದೇ ಭಾರಿ ವಾಹನಗಳು ಪ್ರವೇಶ ಮಾಡದಂತೆ ಕ್ರಮ ತೆಗೆದುಕೊಂಡಿದ್ದಾರೆ.

ಹೌದು ಕ್ಯಾಂಪ್ ಮತ್ತು ಪೋರ್ಟ ರಸ್ತೆಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಭಾರಿ ವಾಹನಗಳಿಂದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಇದರಿಂದ ಬೆಳಗಾವಿ ನಗರ ಪೊಲೀಸರ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಇದರಿಂದಾಗಿ ಗುರುವಾರ ತಮ್ಮ ಕಚೇರಿಯಲ್ಲಿ ಡಿಸಿಪಿ ಪಿ.ವ್ಹಿ.ಸ್ನೇಹಾ ಅವರು ಕ್ಯಾಂಪ್ ಪ್ರದೇಶದ ವಿದ್ಯಾರ್ಥಿಗಳ ಜೊತೆಗೆ ಪಾಲಕರ ಜೊತೆಗೆ ಸಭೆ ನಡೆಸಿದರು.

ಇನ್ಮುಂದೆ ಈ ರೀತಿ ಘಟನೆ ಆಗದಂತೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪಾಲಕರಿಗೆ ಭರವಸೆ ನೀಡಿದರು. ಅಲ್ಲದೇ ದೊಡ್ಡ ದೊಡ್ಡ ವಾಹನಗಳು ಶಾಲೆ ಆರಂಭವಾಗುವ ಸಮಯ ಮತ್ತು ಶಾಲೆ ಬಿಡುವ ಸಮಯದಲ್ಲಿ ನಗರ ಪ್ರವೇಶ ಮಾಡದಂತೆ ಈ ವೇಳೆ ತೀರ್ಮಾನವನ್ನು ತೆಗೆದುಕೊಳ್ಳಲಾಯಿತು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ