Breaking News

ಮೊಹರಂ ಹಬ್ಬ ಹಿನ್ನಲೆ : ಆಗಸ್ಟ್ 7 ರಿಂದ 10 ರವರೆಗೆ ಮದ್ಯ ಮಾರಾಟ ನಿಷೇಧ

Spread the love

ಹೊಸಪೇಟೆ : ಮೊಹರಂ ಹಬ್ಬ ಆಚರಣೆ ನಿಮಿತ್ತ ಜಿಲ್ಲೆಯಾದ್ಯಂತ ಮದ್ಯಪಾನ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಹಾಗೂ ಬಾರ್&ರೆಸ್ಟೋರೆಂಟ್‍ಗಳನ್ನು ಮುಚ್ಚುವಂತೆ ವಿಜಯನಗರ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಅನಿರುದ್ಧ ಶ್ರವಣ್ ಅವರು ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ.

ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ವಿಜಯನಗರ ಜಿಲ್ಲೆಯಾದ್ಯಂತ ಆ.07ರಂದು ಬೆಳಗ್ಗೆ 6ರಿಂದ ಆ.10ರ ರಾತ್ರಿ 10ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಮದ್ಯದ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್‍ಗಳನ್ನು ಮುಚ್ಚುವಂತೆ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ್.ಪಿ ಅವರು ಆದೇಶಿಸಿದ್ದಾರೆ.

ಈ ಆದೇಶವನ್ನು ಅನುಷ್ಠಾನಕ್ಕೆ ತರಲು ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ವಿಜಯನಗರ ಜಿಲ್ಲೆಯ ಜಿಲ್ಲಾ ಪೆÇಲೀಸ್ ಅಧೀಕ್ಷಕರು ಹಾಗೂ ಅಬಕಾರಿ ಇಲಾಖೆಯ ಅಬಕಾರಿ ಉಪ ಆಯುಕ್ತರು ಜರುಗಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ