Breaking News

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ

Spread the love

ಕಾರವಾರ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗೆ ಕಾರವಾರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ತ್ವರಿತ ವಿಚಾರಣೆಯ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಹಾಗೂ 1. 20 ಲಕ್ಷ ರೂ ದಂಡ ವಿಧಿಸಿದೆ.

ಮುಂಡಗೋಡದ ಓರಲಗಿಯ ಶಿವಾನಂದ ಗೌಳೇರ (60 ವರ್ಷ) ಶಿಕ್ಷೆಗೊಳಗಾದ ಅಪರಾಧಿ. ಈತ ಬಾಲಕಿಯನ್ನು ಮನೆೆ ಹಾಗೂ ಹೊಲಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ಸೆ. 16- 2021ರಲ್ಲಿ ಪೋಕ್ಸೊ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಸಿಪಿಐ ಸಿದ್ದಪ್ಪ ಸಿಮಾನಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಅದರಂತೆ ಸುದೀರ್ಘ ವಿಚಾರಣೆ ಬಳಿಕ ನ್ಯಾಯಾಧೀಶರಾದ ಶಿವಾಜಿ ನಲವಾಡೆ ಅವರು ಅಪರಾಧಿಗೆ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸಂತ್ರಸ್ತೆ ಪರವಾಗಿ ಸರ್ಕಾರಿ ಅಭಿಯೋಜಕ ಶುಭಾ.ಆರ್ ಗಾಂವಕರ್ ವಾದಿಸಿದ್ದರು.


Spread the love

About Laxminews 24x7

Check Also

ಗ್ರಾಹಕ ನ್ಯಾಯಾಲಯಕ್ಕೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿದರೆ, ಗೋಕಾಕ್ ಜಾತ್ರೆ ಬಂದೋಬಸ್ತ್​​ಗೆ ಬಂದಿದ್ದ ಹುಬ್ಬಳ್ಳಿ ಎಎಸ್ಐ ಹೃದಯಾಘಾತದಿಂದ ನಿಧನ

Spread the loveಬೆಂಗಳೂರು/ ಗ್ರಾಹಕ ನ್ಯಾಯಾಲಯಕ್ಕೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿದರೆ, ಗೋಕಾಕ್ ಜಾತ್ರೆ ಬಂದೋಬಸ್ತ್​​ಗೆ ಬಂದಿದ್ದ ಹುಬ್ಬಳ್ಳಿ ಎಎಸ್ಐ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ