Breaking News

ನಿಧಿಗಾಗಿ ಶಿವಲಿಂಗವನ್ನು ಧ್ವಂಸ ಮಾಡಿದ ದುಷ್ಕರ್ಮಿಗಳು

Spread the love

ಕೊಪ್ಪಳ: ನಿಧಿ ಆಸೆಗಾಗಿ ಶಿವಲಿಂಗವನ್ನು ಕಿತ್ತು ಹಾಕಿರುವ ಘಟನೆ ‌ಕೊಪ್ಪಳದಲ್ಲಿ ನಡೆದಿದೆ. ತಾಲೂಕಿನ ಶಿವಪುರ ಗ್ರಾಮದ ಬಳಿ ಇರುವ ಸೋಮನಾಥ ದೇವಾಲಯದಲ್ಲಿ ಶಿವಲಿಂಗವನ್ನು ಧ್ವಂಸಗೊಳಿಸಿ ನಿಧಿ ಶೋಧಿಸಿದ್ದಾರೆ ಎನ್ನಲಾಗ್ತಿದೆ.

ಶಿವಪುರದ ಪಕ್ಕದ ಬೆಟ್ಟದಲ್ಲಿರುವ ಸೋಮನಾಥ ದೇವಾಲಯ ವಿಜಯನಗರ ಸಾಮ್ರಾಜ್ಯದ ಕಾಲದ್ದಾಗಿದೆ. ಈ ಐತಿಹಾಸಿಕ ದೇವಸ್ಥಾನದಲ್ಲಿ ಶಿವಲಿಂಗ ಪ್ರತಿಷ್ಠಾನೆ ಮಾಡಿರುವ ಸ್ಥಳದ ಸುತ್ತ ಕಬ್ಬಿಣದ ಸಲಾಕೆಗಳಿಂದ ಅಗೆಯಲಾಗಿದೆ. ಇದರಿಂದ ಅಲ್ಲಿದ್ದ ಶಿವಲಿಂಗ ಮೂರ್ತಿ ಭಗ್ನವಾಗಿದೆ. ನಂತರ ಕಬ್ಬಿಣದ ಸಲಕರಣೆಗಳನ್ನು ಅಲ್ಲಿಯೇ ಬಿಟ್ಟು ಕಳ್ಳರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಬೆಳಗ್ಗೆ‌ ಪೂಜೆಗೆಂದು ಬಂದಿದ್ದ ಅರ್ಚಕ ಕೃಷ್ಣ ಎಂಬುವವರು ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ‌ ಮುನಿರಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಷೇರು ಮಾರುಕಟ್ಟೆಯಲ್ಲಿ ರಕ್ತಪಾತ – ಹೂಡಿಕೆದಾರರ 3.93 ಲಕ್ಷ ಕೋಟಿ ಕರಗಿದ್ದು ಯಾಕೆ?

Spread the loveಮುಂಬೈ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ, ಕಚ್ಚಾ ತೈಲ ಬೆಲೆ ಏರಿಕೆ, ಸರ್ಕಾರ ನೀತಿಗಳಿಂದಾಗಿ ಷೇರು ಮಾರುಕಟ್ಟೆಯಲ್ಲಿ  ರಕ್ತಪಾತವಾಗಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ