Breaking News

ಬೀದಿ ನಾಯಿಗಳ ದಾಳಿ – ಮಹಿಳೆಗೆ ಗಂಭೀರ ಗಾಯ ಅಂಬೇಡ್ಕರ್ ನಗರದಲ್ಲಿ ಘಟನೆ

Spread the love

 

 

ಗೋಕಾಕ ಅ 5 : ಮನೆಯಿಂದ ಶೌಚಾಲಯಕ್ಕೆ ತೆರಳುತ್ತಿರುವ ಮಹಿಳೆಯ ಮೇಲೆ ಬೀದಿ ನಾಯಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ನಗರದ 21 ನೇ ವಾರ್ಡ್‍ನ ಅಂಬೇಡ್ಕರ್ ನಗರದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಅಬೇದಾ ಮುಸ್ತಫಾ ಕಲ್ಲೋಳಿ ಎಂಬ ಮಹಿಳೆ ಮಧ್ಯಾಹ್ನ ಶೌಚಾಲಯಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಹಿಂದಿನಿಂದ ಬಂದ ಬೀದಿ ನಾಯಿಯು ಮಹಿಳೆಯ ಕಾಲಿಗೆ ಕಚ್ಚಿ ಗಂಭೀರವಾಗಿ ಗಾಯಗೋಳಿಸಿದ್ದು, ಮಹಿಳೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಂಬೇಡ್ಕರ್ ನಗರ ಸೇರಿದಂತೆ ನಗರದ ಇತರೆ ಬಡಾವಣೆಯಲ್ಲಿ ಬೀದಿನಾಯಿಗಳ ಹಾವಳಿ ಮಿತಿಮೀರಿದ್ದು ಪ್ರತಿನಿತ್ಯ ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿದೆ.

ಮಕ್ಕಳು ಆಟ ಆಡುವಾಗ, ಶಾಲೆಯಿಂದ ಬರುವಾಗ ದಾಳಿ ಮಾಡುತ್ತಿವೆ. ಈ ಬಗ್ಗೆ ನಗರಸಭೆಗೆ ದೂರು ನೀಡಿದರೂ, ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇನ್ನಾದರೂ ನಗರಸಭೆ ಅಧಿಕಾರಿಗಳು ಶ್ವಾನಗಳ ಹಾವಳಿಗೆ ಕಡಿವಾಣ ಹಾಕುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

 


Spread the love

About Laxminews 24x7

Check Also

ಡಿ.ಕೆ. ಶಿವಕುಮಾರ್ ಸಿಎಂ: ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅದ್ಧೂರಿ ವಿಜಯೋತ್ಸವ

Spread the loveರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ಗಡಿನಾಡು ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ