Breaking News

ಎಸಿಬಿ ವಿಚಾರಣೆಗೆ ಹಾಜರಾದ ಜಮೀರ್ ಅಹಮದ್

Spread the love

ಬೆಂಗಳೂರು: ಶಾಸಕ ಜಮೀರ್ ಅಹಮದ್ ಖಾನ್ ಎಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. 10 ದಿನದ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಭ್ರಷ್ಟಾಚಾರ ನಿಗ್ರಹ ದಳ ಇಲಾಖೆ ನೋಟಿಸ್ ನೀಡಿದ್ದ, ಹಿನ್ನೆಲೆಯಲ್ಲಿ ತನಿಖಾಧಿಕಾರಿ ಎಸಿಬಿ ಡಿವೈಎಸ್​ಪಿ ರವಿಶಂಕರ್ ಎದುರು ವಿಚಾರಣೆಗೆ ಹಾಜರಾಗಿದ್ದಾರೆ‌.

ಕಳೆದ ಜುಲೈ 5 ರಂದು ಶಾಸಕ ಜಮೀರ್ ಅಹಮದ್ ಖಾನ್ ಅವರ ಮನೆ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಫ್ಲ್ಯಾಟ್​ಗಳ ಮೇಲೆ ಎಸಿಬಿ ದಾಳಿ ನಡೆಸಿತ್ತು. ದಾಳಿ ವೇಳೆ ಅಕ್ರಮ ಆಸ್ತಿ ಗಳಿಕೆ ಕಂಡುಬಂದ ಹಿನ್ನೆಲೆ ಆಸ್ತಿಗೆ ಸಂಬಂಧಿಸಿದ ಆದಾಯದ ಮೂಲ ದಾಖಲೆ ತರುವಂತೆ ಸೂಚನೆ ನೀಡಲಾಗಿತ್ತು.

ಮೊದಲು ಬಕ್ರೀದ್, ಬಳಿಕ ಸಿದ್ಧರಾಮೋತ್ಸವ ಕಾರ್ಯಕ್ರಮದ ಕಾರಣ ನೀಡಿ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ್ದ ಶಾಸಕ ಜಮೀರ್ ಅಹಮದ್​ಗೆ, ಕಡ್ಡಾಯವಾಗಿ ಆಗಸ್ಟ್ 6 ರಂದು ಕಚೇರಿಗೆ ಹಾಜರಾಗಲು ಎಸಿಬಿ ಸೂಚಿಸಿತ್ತು


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ