Breaking News

ದರ್ಶನ್ ಜೊತೆ ನಟಿ ಮಾಲಾಶ್ರೀ ಮಗಳು ಚಿತ್ರರಂಗಕ್ಕೆ ಎಂಟ್ರಿ!

Spread the love

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್, ಡಿ ಬಾಸ್ ಖ್ಯಾತಿಯ ನಟ ದರ್ಶನ್ ಅವರ ‘ಕ್ರಾಂತಿ’ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಮಧ್ಯೆ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಅವರ ಹೊಸ ಚಿತ್ರವೊಂದರ ಮುಹೂರ್ತ ಸದ್ದಿಲ್ಲದೆ ನೆರವೇರಿದೆ. ರಾಕ್‍ಲೈನ್ ವೆಂಕಟೇಶ್ ನಿರ್ಮಾಣದ ಈ ಹೊಸ ಚಿತ್ರಕ್ಕೆ ತರುಣ್ ಸುಧೀರ್ ಆಕ್ಷನ್ ಕಟ್ ಹೇಳಲಿದ್ದಾರೆ.

 

ಸ್ಯಾಂಡಲ್‍ವುಡ್‍ಗೆ ‘ಕನಸಿನ ರಾಣಿ’ಯ ಪುತ್ರಿಯ ಎಂಟ್ರಿ!.

ಜೊತೆಗೆ ನಾಯಕಿಯಾಗಿ ‘ಕನಸಿನ ರಾಣಿ’ ಮಾಲಾಶ್ರೀ ಪುತ್ರಿ ಸ್ಕ್ರೀನ್ ಶೇರ್ ಮಾಡಲಿದ್ದು, ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. 90ರ ದಶಕದಲ್ಲಿ ಕನ್ನಡ ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ಆಗಿ ಮಿಂಚಿದ ನಟಿ ಮಾಲಾಶ್ರೀಯವರ ಮಗಳು ರಾಧನಾ ರಾಮ್ ಈ ಚಿತ್ರದ ನಾಯಕಿಯಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡಲಿದ್ದಾರೆ. ಖ್ಯಾತ ನಿರ್ಮಾಪಕ ದಿವಂಗತ ರಾಮುರವರ ಪುತ್ರಿ ದರ್ಶನ್ ಜೊತೆಗೆ ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಡುತ್ತಿರುವುದು ವಿಶೇಷವಾಗಿದೆ.ಇನ್ನು ತಮ್ಮ ಮಗಳು ಚಿತ್ರರಂಗಕ್ಕೆ ಎಂಟ್ರಿಯಾಗುತ್ತಿರುವುದಕ್ಕೆ ಖುಷಿ ವ್ಯಕ್ತಪಡಿಸಿರುವ ನಟಿ ಮಾಲಾಶ್ರೀ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ನನ್ನ ಮುದ್ದಿನ ಮಗಳು ಇಂದು ನನಗೆ ಅಪಾರ ಪ್ರೀತಿ ಹಾಗೂ ಬದುಕು ನೀಡಿದ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾಳೆ… ನನಗೆ ನೀಡಿದ ಪ್ರೀತಿ ಮತ್ತು ಆಶೀರ್ವಾದ ಅವಳ ಮೇಲೂ ಇರಲಿ ಎಂದು ಆಶಿಸುತ್ತೇನೆ’ ಎಂದು ಮನವಿ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ