ಮೈಸೂರು, ಆಗಸ್ಟ್ 6: ದಿವಂಗತ ನಟ ಪುನೀತ್ ರಾಜ್ ಕುಮಾರ್ ನೆನಪಿಗಾಗಿ ಬಹುಭಾಷಾ ನಟ ಪ್ರಕಾಶ್ ರಾಜ್ ‘ಅಪ್ಪು ಎಕ್ಸ್‌ಪ್ರೆಸ್’ ಆಂಬುಲೆನ್ಸ್ ಅನ್ನು ಮಿಷನ್ ಆಸ್ಪತ್ರೆಗೆ ಕೊಡುಗೆಯಾಗಿ ನೀಡಿದ್ದಾರೆ.
ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ” ಪುನೀತ್ ರಾಜ್ ಕುಮಾರ್ ಕನ್ನಡ ನಾಡಿನ ಕಣ್ಮಣಿ.
ಕೇವಲ ಕರ್ನಾಟಕ ಮಾತ್ರವಲ್ಲ ವಿಶ್ವದಾದ್ಯಂತ ತನ್ನ ಸಜ್ಜನಿಕೆ, ಸಮಾಜಸೇವೆ, ಒಳ್ಳೆಯತನ ಮತ್ತು ಅಭಿನಯದಿಂದ ಹೆಸರು ಮಾಡಿದ್ದಾರೆ. ಎಲ್ಲರ ಮನದಲ್ಲೂ ಶಾಶ್ವತವಾಗಿ ನೆಲೆಸಿದ್ದಾರೆ. ಕರ್ನಾಟಕದಾದ್ಯಂತ ಅವರ ಅಭಿಮಾನಿ ಸಂಘಗಳು, ಅವರ ಪೋಸ್ಟರ್‌ಗಳು, ಅವರ ಹೆಸರಿನ ರಸ್ತೆಗಳು ಅವರ ಹಿರಿಮೆ ಸಾರುತ್ತಿದೆ. ಇಂತಹ ಅಪ್ಪು ನೆನಪಿಗೆ ಸಮಾಜಕ್ಕೆ ಏನಾದರೂ ಸೇವಾ ಕಾರ್ಯ ಮಾಡಬೇಕೆಂಬ ಉದ್ದೇಶದಿಂದ ಆಸ್ಪತ್ರೆಗೆ ಆಂಬುಲೆನ್ಸ್ ನೀಡುತ್ತಿದ್ದೇನೆ ಎಂದರು.

Laxmi News 24×7