Breaking News

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ

Spread the love

ಚಾಲಕನ ನಿಯಂತ್ರಣ ತಪ್ಪಿ ಸರಕಾರಿ ಬಸ್‌ವೊಂದು ಅಪಘಾತಕ್ಕೀಡಾದ ಘಟನೆ ಪುಣಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ೪ರಲ್ಲಿ ನಡೆದಿದೆ.

ಹೌದು ಚಾಲಕನ ನಿಯಂತ್ರಣ ತಪ್ಪಿ ಸರಕಾರಿ ಬಸ್‌ವೊಂದು ಬೆಳಗಾವಿ ಹಿರೇಬಾಗೇವಾಡಿ ಮಧ್ಯೆ ಕಮಕಾರಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ ೪ ರಲ್ಲಿ ಬಸ್ ಪಲ್ಟಿಯಾಗಿದೆ.. ಸರಕಾರಿ ಬಸ್ ಕೊಲ್ಹಾಪೂರದಿಂದ ರಾಣೇಬೆನ್ನೂರಿಗೆ ಪ್ರಯಾಣ ಬೆಳೆಸಿತ್ತು. ಇದರಲ್ಲ್ಲಿ ಒಟ್ಟು ೩೫ ಜನ ಪ್ರಯಾಣ ಮಾಡುತ್ತಿದ್ದರು.

ಜಿಟಿ ಜಿಟಿ ಮಳೆಯಾಗುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್‌ನಲ್ಲಿದ್ದ ೧೦ ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಹಿರೇಬಾಗೇವಾಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಕ್ರೇನ್ ಸಹಯದಿಂದ ಬಸ್‌ನ್ನು ತೆರೆಯುವ ಕಾರ್ಯವನ್ನು ಮಾಡಿದ್ದಾರೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ