Breaking News

ಬಬಲೇಶ್ವರ ಪಾಕಿಸ್ತಾನದಲ್ಲಿ ಇದೆಯಾ: ಸವದಿ ಪ್ರಶ್ನೆ

Spread the love

ವಿಜಯಪುರ: ಬಬಲೇಶ್ವರ ವಿಧಾನಸಭಾ ಕ್ಷೇತ್ರವೇನು ಪಾಕಿಸ್ತಾನದಲ್ಲಿ ಇದೆಯಾ? ಅದು ಕರ್ನಾಟಕ ರಾಜ್ಯದಲ್ಲಿ ಇದೆ ತಾನೇ?

ಹೀಗೆಂದು ಪ್ರಶ್ನಿಸಿದವರು ವಿಧಾನ ಪರಿಷತ್‌ ಸದಸ್ಯ ಲಕ್ಷ್ಮಣ ಸವದಿ. ನಾಗಠಾಣದಲ್ಲಿ ಭಾನುವಾರ ನಡೆದ ನೂತನ ಬಸ್‌ ನಿಲ್ದಾಣ ಭೂಮಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಬಲೇಶ್ವರ ಕ್ಷೇತ್ರದಿಂದ ನೀವು ಸ್ಪರ್ಧಿಸುತ್ತೀರಿ ಎಂಬ ಮಾತು ಕೇಳಿಬರುತ್ತಿದೆ ನಿಜಾನಾ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಮೇಲಿನಂತೆ ಉತ್ತರಿಸಿದರು.

 

‘ನಾನು ಸದ್ಯ ವಿಧಾನ ಪರಿಷತ್‌ ಸದಸ್ಯ. ಇನ್ನೂ ಆರು ವರ್ಷ ಅವಧಿ ಇದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಬಲೇಶ್ವರ ಅಥವಾ ಅಥಣಿ ಅಥವಾ ಜಮಖಂಡಿ ಸೇರಿದಂತೆ ಯಾವುದಾದರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಪಕ್ಷ ಸೂಚಿಸಿದರೆ ಖಂಡಿತಾ ಸ್ಪರ್ಧಿಸುತ್ತೇನೆ. ಪಕ್ಷದ ತೀರ್ಮಾನಕ್ಕೆ ಬಿಟ್ಟ ವಿಷಯ. ಅಲ್ಲಿಯ ವರೆಗೆ ಪಕ್ಷದ ಕೆಲಸ ಮಾಡಿಕೊಂಡು ಮುಂದುವರಿಯುತ್ತೇನೆ’ ಎಂದರು.

 


Spread the love

About Laxminews 24x7

Check Also

ವಿಜಯಪುರ ಡಿಸಿಯಾಗಿ ಡಾ. ಆನಂದ.ಕೆ ವರ್ಗಾವಣೆ

Spread the love ವಿಜಯಪುರ ಡಿಸಿಯಾಗಿ ಡಾ. ಆನಂದ.ಕೆ ವರ್ಗಾವಣೆ ವಿಜಯಪುರ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರನ್ನು ರಾಜ್ಯ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ