ಬೆಳಗಾವಿಯ ಗ್ರಾಮೀಣ ಕ್ಷೇತ್ರದ ಬಾಳೇಕುಂದ್ರಿ ಗ್ರಾಮದಲ್ಲಿ ಕನ್ನಡ ಸೇನೆ ವತಿಯಿಂದ ನಿರಾಶ್ರಿತರು, ಕೂಲಿ ಕಾರ್ಮಿಕರು ಮತ್ತು ಬಡ ಕುಟುಂಬಗಳಿಗೆ ಕಾಯಿಪಲ್ಯೆ,ಮತ್ತು ರೇಷನ ಕಿಟ್ ವಿತರಣೆ.
ದೇಶಾದ್ಯಂತ ಮಹಾಮಾರಿ ಕೊರೋನ ಸೋಂಕು ಹರಡಿರುವ ತಡೆಗಟ್ಟುವ ಸಲುವಾಗಿ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ ನಿರಾಶ್ರಿತರು, ಕೂಲಿ ಕಾರ್ಮಿಕರು, ಬಡ ಕುಟುಂಬಗಳು ತೊಂದರೆ ಗೀಡಾಗಿದ್ದರಿಂದ ದಿನ ಬಳಕೆಗೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸಲು ಪರದಾಡುವಂತಾಗಿದೆ.
ನೆರವಿಗೆ ನಿಂತ ಕನ್ನಡ ಸೇನೆ ಜಿಲ್ಲಾಧ್ಯಕ್ಷರಾದ ರಾಜು ಕೋಲಾ ರವರು 300 ಕ್ಕೂ ಹೆಚ್ಚು ಜನರಿಗೆ ರೇಷನ ಕಿಟ್ ಹಾಗೂ ಕಾಯಿಪಲ್ಯೆ ವಿತರಿಸಿದರು.
ಈ ಸಂದರ್ಭದಲ್ಲಿ ಕನ್ನಡ ಸೇನೆಯ ಪದಾಧಿಕಾರಿಗಳು ಮತ್ತು ಅನೇಕ ಕಾರ್ಯಕರ್ತರು ಹಾಜರಿದ್ದರು.
