Breaking News
Home / ರಾಜಕೀಯ / ಹೊಂಬಾಳೆ ಫಿಲ್ಸ್ಮ್​ ಮೂಲಕ ರಮ್ಯಾ ಕಮ್​ ಬ್ಯಾಕ್

ಹೊಂಬಾಳೆ ಫಿಲ್ಸ್ಮ್​ ಮೂಲಕ ರಮ್ಯಾ ಕಮ್​ ಬ್ಯಾಕ್

Spread the love

ರಮ್ಯಾ ದಿವ್ಯ ಸ್ಪಂದನಾ (Ramya Divya Spandana).. ಈ ಹೆಸರು ಕೇಳಿದ ತಕ್ಷಣ ಕನ್ನಡ (Kannada) ಸಿನಿ ರಸಿಕರ ಮನಸ್ಸು ಸಂತೋಷದಿಂದ ಕುಣಿಯುತ್ತದೆ. ಮನಮೋಹಕ ಅಭಿನಯದಿಂದ (Acting) ಕನ್ನಡ ಕಲಾ ರಸಿಕರ ಮನಗೆದ್ದು ಮೋಹಕ ತಾರೆ ಪಟ್ಟವನ್ನು ತಮ್ಮದಾಗಿಸಿಕೊಂಡ ನಟಿ ಇವರು.

ಆದರೆ ಕಳೆದ ಕೆಲ ವರ್ಷಗಳಿಂದ ರಮ್ಯಾ ಚಿತ್ರರಂಗದಿಂದ ಕಾಣೆಯಾಗಿದ್ದರು. ಇದೀಗ ಅವರು ಮತ್ತೆ ಸಿನಿಮಾಗೆ ಬರಲು ಸಜ್ಜಾಗಿದ್ದಾರೆ. ಈ ವಿಚಾರ ಹಳೆಯದು, ಹೊಸ ವಿಚಾರ ಎಂದರೆ ರಮ್ಯಾ ಹೊಂಬಾಳೆ ಫಿಲ್ಮ್ಸ್​ ಪ್ರೊಡಕ್ಷನ್ ಹೌಸ್​ (Hombale Films Production House) ಮೂಲಕ ತೆರೆ ಮೇಲೆ ಬರಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ. ಏನಿದು ವಿಚಾರ? ಈ ಸ್ಟೋರಿ .

ಹೊಂಬಾಳೆ ಫಿಲ್ಮ್ಸ್ ಮೂಲಕ ರಮ್ಯಾ ಕಮ್​ಬ್ಯಾಕ್​?

ಸದ್ಯ ಸ್ಯಾಂಡಲ್​ವುಡ್​ನಲ್ಲಿ ರಮ್ಯಾ ಹೊಂಬಾಳೆ ಫಿಲ್ಮ್ಸ್ ಮೂಲಕ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಕಾರಣ, ಕೆಜಿಎಫ್ ಸಿನಿಮಾದ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಅವರ ಕೆ.ಆರ್.ಜಿ ಸ್ಟುಡಿಯೋಗೆ ನಿನ್ನೆ ರಮ್ಯಾ ವಿಸಿಟ್​ ಮಾಡಿರುವುದು. ಹೌದು, ರಮ್ಯಾ ನಿನ್ನೆಯಷ್ಟೇ, ಕೆ.ಆರ್.ಜಿ ಸ್ಟುಡಿಯೋಗೆ ಭೇಟಿ ನೀಡಿದ್ದಾರೆ. ಅಲ್ಲಿ ಸ್ವಲ್ಪ ಕಳೆದಿದ್ದಾರೆ. ಹಾಗಾಗಿ ರಮ್ಯಾ ಹೊಂಬಾಳೆ ಫಿಲ್ಮ್ಸ್ ಜೊತೆ ಸಿನಿಮಾ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಕೇಳಿ ಬರುತ್ತಿದೆ.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ