ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿಯ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಆಗಸ್ಟ್ ಅಂತ್ಯಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಲಾಗುತ್ತಿದೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದು, ಈ ಬಗ್ಗೆ ಈಗಾಗಲೇ ಬಿಜೆಪಿ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಖಾಲಿ ಇರುವ ಒಟ್ಟು 5 ಸಚಿವ ಸ್ಥಾನಗಳ ಪೈಕಿ 4 ಸ್ಥಾನ ಭರ್ತಿ ಮಾಡಲು ಸಿಎಂ ಬೊಮ್ಮಾಯಿ ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಒಟ್ಟು 4 ಸಚಿವ ಸ್ಥಾನ ಭರ್ತಿ ಮಾಡಲು ಸಿಎಂ ಬೊಮ್ಮಾಯಿ ನಿರ್ಧರಿಸಿದ್ದು, ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಲಕ್ಷ್ಮಣ ಸವದಿ, ಸಿ.ಪಿ. ಯೋಗೇಶ್ವರ್ ಅವರು ಸಂಪುಟ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.