Breaking News

ಕರ್ನಾಟಕದಲ್ಲಿ ಮಳೆಯಿಂದ 1 ವಾರದಲ್ಲಿ 34 ಜನ ಸಾವು; ಈ ರಾಜ್ಯಗಳಲ್ಲಿ ಹೈ ಅಲರ್ಟ್​ ಘೋಷಣೆ

Spread the love

ಬೆಂಗಳೂರು: ಕರ್ನಾಟಕದಲ್ಲಿ ಇನ್ನೂ ಮಳೆಯ ಆರ್ಭಟ (Rainfall) ಮುಂದುವರೆದಿದೆ.

ರಾಜ್ಯಾದ್ಯಂತ ಕಳೆದೊಂದು ವಾರದಲ್ಲಿ ಮಳೆಯಿಂದ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಕರ್ನಾಟಕದ (Karnataka Rain) ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ನೆರೆಯ ರಾಜ್ಯಗಳಲ್ಲೂ ವರುಣನ ಅಬ್ಬರ ಮುಂದುವರೆದಿದ್ದು, ಮುಂದಿನ ಕೆಲವು ದಿನಗಳವರೆಗೆ ಮಹಾರಾಷ್ಟ್ರ, ಕೇರಳ, ಒಡಿಶಾ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದೆ. ಆ. 1ರಿಂದ ರಾಜ್ಯದ ವಿವಿಧೆಡೆ ಮಳೆ ಚುರುಕುಗೊಂಡ ಬಳಿಕ ಶನಿವಾರದವರೆಗೆಮಳೆಸಂಬಂಧಿ ಅನಾಹುತಗಳಲ್ಲಿ ಒಟ್ಟು 27 ಮಂದಿ ಮೃತಪಟ್ಟಿದ್ದರು. ಭಾನುವಾರ ಮತ್ತೆ 5 ಮಂದಿ ಮೃತಪಟ್ಟಿದ್ದು ಒಟ್ಟು ಮೃತಪಟ್ಟವರ ಸಂಖ್ಯೆ 34ಕ್ಕೇರಿದೆ.

ಕೊಡಗು, ಚಿಕ್ಕಮಗಳೂರು ಜಿಲ್ಲೆಗಲ್ಲಿ ಭಾರೀ ಮಳೆಯಾಗಿದ್ದರೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳಲ್ಲೂ ಉತ್ತಮ ಮಳೆ ಸುರಿದಿದೆ. ಇನ್ನು ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿರುವ ಕೊಡಗು ಜಿಲ್ಲೆಯಲ್ಲಿ ಇಂದು ಆರೆಂಜ್‌ ಅಲರ್ಟ್‌ ನೀಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಛತ್ತೀಸ್‌ಗಢ ಮತ್ತು ಒಡಿಶಾದ ಕೆಲವು ಭಾಗಗಳಲ್ಲಿ ಆಗಸ್ಟ್ 9ರಂದು ಅತಿ ಹೆಚ್ಚು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗೋವಾ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಆಗಸ್ಟ್ 11ರವರೆಗೆ ಇದೇ ರೀತಿಯ ಹವಾಮಾನ ಮುಂದುವರಿಯಬಹುದು. ಆಗಸ್ಟ್ 9ರವರೆಗೆ ರಾಜಸ್ಥಾನದಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Spread the love

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ