Breaking News

ಈ ಬಾರಿ ಗಣೇಶೋತ್ಸವಕ್ಕೆ ನಿರ್ಬಂಧಗಳಿಲ್ಲ: ಕಂದಾಯ ಸಚಿವ ಆರ್‌.ಅಶೋಕ

Spread the love

ಬೆಂಗಳೂರು: ಈ ವರ್ಷದ ಗಣೇಶೋತ್ಸವವನ್ನು ಕೋವಿಡ್‌ ಪೂರ್ವದಂತೆ ನಡೆಸಲು ಅನುಮತಿ ನೀಡಲಾಗುವುದು. ಯಾವುದೇ ನಿರ್ಬಂಧಗಳನ್ನು ವಿಧಿಸುವುದಿಲ್ಲ ಎಂದು ಕಂದಾಯ ಸಚಿವ ಆರ್‌.ಅಶೋಕ ತಿಳಿಸಿದರು.

ಈ ಸಂಬಂಧ ಮುಖ್ಯಮಂತ್ರಿಯವರ ಜತೆ ಚರ್ಚೆ ನಡೆಸಲಾಗಿದೆ.

ಅವರು ಒಪ್ಪಿಗೆ ನೀಡಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕಳೆದ ಎರಡು ವರ್ಷ ಕೋವಿಡ್‌ನಿಂದಾಗಿ ಸಾರ್ವಜನಿಕ ಗಣೇಶೋತ್ಸವಗಳ ಮೇಲೆ ನಿರ್ಬಂಧಗಳನ್ನು ಹೇರಲಾಗಿತ್ತು. ಸಾರ್ವಜನಿಕರ ಪ್ರಾಣ ಒದಗಿಸುವುದು ಮುಖ್ಯವಾಗಿತ್ತು. ಸರ್ಕಾರದ ಮನವಿಗೆ ಸಾರ್ವಜನಿಕರು ಸ್ಪಂದಿಸಿದ್ದರು. ಈ ಬಾರಿ ಯಾವುದೇ ರೀತಿಯ ಅಡೆತಡೆಗಳಿರುವುದಿಲ್ಲ. ಕೋವಿಡ್‌ ಪೂರ್ವದಲ್ಲಿ ಹೇಗಿತ್ತೋ ಆ ರೀತಿ ಆಚರಣೆ ನಡೆಸಬಹುದಾಗಿದೆ ಎಂದರು.


Spread the love

About Laxminews 24x7

Check Also

ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ BRP?*

Spread the love ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ