Breaking News

ಬಳ್ಳಾರಿ ನಾಲಾಗೆ ಡಿಸಿ ನಿತೇಶ್ ಪಾಟೀಲ್ ಬೆಳೆ ಹಾನಿ ಸಮೀಕ್ಷೆ ಮಾಡಿ ಸೂಕ್ತ ಪರಿಹಾರ ನೀಡುತ್ತೇವೆ ಎಂದ ಜಿಲ್ಲಾಧಿಕಾರಿಗಳು

Spread the love

ಬೆಳಗಾವಿಯಲ್ಲಿ ಭಾರಿ ಮಳೆ ಹಿನ್ನೆಲೆ ಬಳ್ಳಾರಿ ನಾಲಾದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ ಮಳೆ ನಿಂತ ಮೇಲೆ ಬೆಳೆ ಹಾನಿ ಸಮೀಕ್ಷೆ ಮಾಡಿ ಸೂಕ್ತ ಪರಿಹಾರ ನೀಡುತ್ತೇವೆ ಎಂದು ಜಿಲ್ಲಾಧಿಕಾರಿಗಳು ಭರವಸೆ ಕೊಟ್ಟಿದ್ದಾರೆ.

ಹೌದು ಭಾರಿ ಮಳೆಯಿಂದ ಬೆಳಗಾವಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಅವಾಂತರ ಸೃಷ್ಟಿಯಾಗಿದೆ. ಯಡಿಯೂರಪ್ಪ ಮಾರ್ಗದಲ್ಲಿರುವ ಬಳ್ಳಾರಿ ನಾಲಾಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಪ್ರವಾಹ ಪರಿಸ್ಥಿತಿ ವೀಕ್ಷಿಸಿದರು. ಸಾಕಷ್ಟು ಪ್ರಮಾಣದಲ್ಲಿ ಜಮೀನುಗಳಿಗೆ ನೀರು ನುಗ್ಗಿ ರೈತರು ಬೆಳೆದಿದ್ದ ಬೆಳೆಗಳು ನೀರಲ್ಲಿ ನಿಂತಿವೆ. ಬೆಳೆ ಸಂಪೂರ್ಣವಾಗಿ ಹಾನಿ ಆಗುವ ಭೀತಿ ರೈತರನ್ನು ಕಾಡುತ್ತಿದೆ.

ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಎನ್‍ಡಿಆರ್‍ಎಫ್ ನಿಯಮಾವಳಿ ಪ್ರಕಾರ ಬೆಳಿಗ್ಗೆ 11 ಗಂಟೆಗೆ ಮನೆ ಬಿದ್ದಿತ್ತು ಸಂಜೆ ಆರು ಗಂಟೆ ಅಷ್ಟೋತ್ತಿಗೆ ಅವರ ಖಾತೆಗಳಿಗೆ 10 ಸಾವಿರ ರೂಪಾಯಿ ಜಮೆ ಮಾಡಿದ್ದೇವೆ. ಅದೇ ರೀತಿ ದಿನಸಿ ಪದಾರ್ಥಗಳ ಕಿಟ್‍ನ್ನು ಇದೇ ಪ್ರಥಮ ಬಾರಿಗೆ ಕೊಟ್ಟಿದ್ದೇವೆ. ತಕ್ಷಣವೇ 10 ಸಾವಿರ ರೂಪಾಯಿ ಪರಿಹಾರ ಕೊಟ್ಟಿದ್ದೇವೆ.

ದಿನಸಿ ಕಿಟ್‍ಗಳನ್ನು ಕೂಡ ಕೊಟ್ಟಿದ್ದೇವೆ. ಮತ್ತೆ ಸರ್ಕಾರದ ಗಮನಕ್ಕೆ ತಂದು ಏನು ಜಾಸ್ತಿ ಕೊಡಬಹುದು ಕೊಡುತ್ತೇವೆ ಎಂದರು. ಖಂಡಿತವಾಗಲೂ ಸಮೀಕ್ಷೆ ಮಾಡಿ ಒಬ್ಬರೂ ಮಿಸ್ ಆಗದಂತೆ ಪರಿಹಾರ ನೀಡುತ್ತೇವೆ. ಬೆಳೆ ಹಾನಿ ಬಗ್ಗೆ ಈಗಾಗಲೇ ನಾಲ್ಕೂವರೇ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಆದರೆ ಮಳೆ ನಿಂತ ಮೇಲೆ ಸಮೀಕ್ಷೆ ಆದ ಮೇಲೆ ಬರುತ್ತದೆ. ಅದೇ ರೀತಿ ರಸ್ತೆ, ಹೆಸ್ಕಾಂ, ಸೇತುವೆ ಹಾನಿ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೇವೆ ಎಂದರು.ಮಳೆ ಬಂದಾಗ ಬಳ್ಳಾರಿ ನಾಲಾ ಸುತ್ತಮುತ್ತಲಿನ ಮನೆಗಳಿಗೆ ನೀರು ನುಗ್ಗುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಡಿಪಿಆರ್ ಸಿದ್ಧಪಡಿಸಲು ಬೃಹತ್ ನೀರಾವರಿ, ಸಣ್ಣ ನೀರಾವರಿ ಇಲಾಖೆ ಪಾಲಿಕೆ ಸೇರಿ ಇತರೆ ಅಧಿಕಾರಿಗಳ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವರ ಸಭೆ ನಡೆಸಲಿದ್ದಾರೆ. ಹೀಗಾಗಿ ಇಂದು ನಾವು ಇಲ್ಲಿಗೆ ಭೇಟಿ ನೀಡಿದ್ದೇವೆ. ಒಂದು ಡಿಪಿಆರ್ ಮಾಡಿ ಅದಕ್ಕೆ ಶಾಶ್ವತ ಪರಿಹಾರ ಮಾಡಲು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು.


Spread the love

About Laxminews 24x7

Check Also

ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ

Spread the love ಹುಕ್ಕೇರಿ : ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ ಹುಕ್ಕೇರಿ ನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ