ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ನಾನು ಕೂಡ ಮುಖ್ಯಮಂತ್ರಿ ಸ್ಥಾನದ ಅಕಾಂಕ್ಷಿ ಎಂದು ಹೇಳುವ ಮೂಲಕ ಮತ್ತೆ ಅರಣ್ಯ ಮತ್ತು ಆಹಾರ ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಸಿಎಂ ಸ್ಥಾನವನ್ನು ಜಪಿಸಿದ್ದಾರೆ.
ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರದ ಗಗನಚುಕ್ಕಿ ಜಲಪಾತ ವೀಕ್ಷಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಉಮೇಶ ಕತ್ತಿ ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಾಪೋಹವಾಗಿದೆ. ನಾನು ಕೂಡ 8 ಬಾರಿ ಶಾಸಕನಾಗಿ ಆಯ್ಕೆಯಾಗಿ, ಹಲವು ಖಾತೆಗಳ ಸಚಿವನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಮುಖ್ಯಮಂತ್ರಿಯಾಗಿ ನಾಡಿನ ಜನರ ಸೇವೆ ಸಲ್ಲಿಸುವ ಹಂಬಲ ಹೊಂದಿದ್ದೇನೆ ಎಂದರು.
ಇನ್ನು ಯಡಿಯೂರಪ್ಪ ಬಿಜೆಪಿ ಹಿರಿಯ ನಾಯಕರಾಗಿದ್ದಾರೆ. ಅವರನ್ನು ಎಂದಿಗೂ ಕಡೆಗಣಿಸಿಲ್ಲ ಎಂದ ಉಮೇಶ ಕತ್ತಿ ಮೇಕೆದಾಟು ಯೋಜನೆ ಜಾರಿ ಮಾಡಲು ತಮಿಳುನಾಡು ಸರ್ಕಾರ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
Laxmi News 24×7