Breaking News

ಡೆತ್​ನೋಟ್​ ಬರೆದಿಟ್ಟು ಉಪನ್ಯಾಸಕಿ ಆತ್ಮಹತ್ಯೆ: ಹುಟ್ಟು ಹಬ್ಬದ ದಿನವೇ ದುರಂತ ಅಂತ್ಯ

Spread the love

ಚಾಮರಾಜನಗರ: ಕಾಲೇಜು ಉಪನ್ಯಾಸಕಿಯೊಬ್ಬರು ಹಾಸ್ಟೆಲ್​ನಲ್ಲಿ ನೇಣುಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಸಂಭವಿಸಿದೆ. ಸಾವಿಗೂ ಮುನ್ನ ಬರೆದ ಡೆತ್‌ನೋಟ್ ಸಿಕ್ಕಿದೆ.

ಚಂದನಾ(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ, ಚಾಮರಾಜನಗರದ ಜೆಎಸ್‌ಎಸ್‌ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಇಂದು(ಆ.9) ಅವರ ಬರ್ತ್​ ಡೇ. ಈ ದಿನವೇ ಜೆಎಸ್‌ಎಸ್ ಕಾಲೇಜಿನ ಹಾಸ್ಟೆಲ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಡೆತ್​ನೋಟ್​ ಪತ್ತಯಾಗಿದ್ದು, ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆಯಲಾಗಿದೆ. ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ