ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗೆ ಭಾನುವಾರ ಗೋಕಾಕದ ಪರೀಕ್ಷಾ ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ನಕಲಿಗಾಗಿ ಸ್ಮಾರ್ಟ್ ವಾಚ್
ಉಪಯೋಗಿಸಲೆತ್ನಿಸಿದ ಆರೋಪದಲ್ಲಿಅಭ್ಯರ್ಥಿಯೋರ್ವನನ್ನುಗೋಕಾಕ ಶಹರ ಠಾಣೆ ಪೊಲೀಸರು ಬಂಧಿಸಿ ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಗೋಕಾಕ್ ತಾಲೂಕಿನ ಮೂಡಲಗಿ ಗ್ರಾಮದ ಸಿದ್ದಪ್ಪ ಮದಿಹಳ್ಳಿ(20) ಬಂಧಿತ ಆರೋಪಿ. ಕಳೆದ ಭಾನುವಾರ ಗೋಕಾಕ ನಗರದ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಬಂಧಿತ ಆರೋಪಿ ಸ್ಮಾರ್ಟ್ ವಾಚ್ ನಲ್ಲಿ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ಕಳುಹಿಸುತ್ತಿದ್ದ. ಬಳಿಕ ಅದೇ ಸ್ಮಾರ್ಟ್ ವಾಚ್ ಗೆ ಬರುವ ಉತ್ತರವನ್ನು ನೋಡಿ ಪರೀಕ್ಷೆ ಬರೆಯುತ್ತಿದ್ದನು. ಇದನ್ನು ಸಿಸಿ ಕ್ಯಾಮರಾದಲ್ಲಿ ಗಮನಿಸಿದ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪರೀಕ್ಷೆಯಲ್ಲಿ ಅಕ್ರಮ ನಡೆಸಿರುವುದು ಅ
ಗೊತ್ತಾಗುತ್ತಿದ್ದಂತೆ ಸದ್ಯ ಆರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಲಾಗಿದೆ. ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮಗಳು ನಡೆದ ಸಂದೇಹಗಳ ಹಿನ್ನೆಲೆಯಲ್ಲಿ ಬೆಳಗಾವಿ ಎಸ್ಪಿ ಡಾ.ಸಂಜೀವ್ ಪಾಟೀಲ ಈಗಾಗಲೇ ಎರಡು ಪ್ರತ್ಯೇಕ ತಂಡಗಳನ್ನು ರಚಿಸಿ ತನಿಖೆ ಚುರುಕುಗೊಳಿಸಿದ್ದಾರೆ. ಈ ಕುರಿತು ಗೋಕಾಕ್ ಶಹರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
f
↑
Laxmi News 24×7