Breaking News

ಅತಿವೃಷ್ಟಿಯ ಹಾನಿಗೆ 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ: ಸಚಿವ ಗೋವಿಂದ ಕಾರಜೋಳ

Spread the love

ಬೆಳಗಾವಿ: ಅತಿವೃಷ್ಟಿಯಿಂದ ಮನೆಹಾನಿ ಅಥವಾ ಮನೆಗಳಿಗೆ ನೀರು ನುಗ್ಗಿದ ಸಂದರ್ಭದಲ್ಲಿ ಸಂತ್ರಸ್ತ ಕುಟುಂಬಗಳಿಗೆ 24 ಗಂಟೆಗಳಲ್ಲಿ ಪರಿಹಾರ ನೀಡಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಸೂಚನೆ ನೀಡಿದರು.

 

ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಕೈಗೊಳ್ಳಲಾದ ಕ್ರಮಗಳ ಪರಿಶೀಲನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯಾವುದೇ ಕುಟುಂಬಗಳು 2019 ರ ನಂತರ ಮನೆ ಬಿಟ್ಟು ಬೇರೆ ಕಡೆ ಇದ್ದಾಗಲೂ ಅಂತಹ ಖಾಲಿ ಮನೆಗಳು ಬಿದ್ದರೂ ಕೂಡ ಅಂತಹ ಕುಟುಂಬಗಳಿಗೂ ಮನೆಹಾನಿ ಪರಿಹಾರವನ್ನು ಬಿಡುಗಡೆಗೊಳಿಸಬೇಕು ಎಂದರು.

ವಿದ್ಯುತ್ ಸಂಪರ್ಕ ಕಡಿತಗೊಂಡರೆ ಕೂಡಲೇ ಸಂಪರ್ಕ ಕಲ್ಪಿಸಬೇಕು. ಜಲಜೀವನ ಮಿಷನ್ ಕಾಮಗಾರಿ ಪೂರ್ಣಗೊಳ್ಳುವವರೆಗೆ ಕುಟುಂಬಗಳು ಹೊಂದಿರುವ ಹಳೆಯ ನಳಗಳ ಸಂಪರ್ಕವನ್ನು ಮುಂದುವರಿಸಬೇಕು. ಜಲಜೀವನ ಮಿಷನ್ ಯೋಜನೆ ಸಂಪೂರ್ಣ ಅನುಷ್ಠಾನಗೊಂಡ ಬಳಿಕವೇ ಹಳೆಯ ಸಂಪರ್ಕ ತೆರವುಗೊಳಿಸಬೇಕು ಎಂದು ಹೇಳಿದರು.


Spread the love

About Laxminews 24x7

Check Also

ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ

Spread the love ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ