Breaking News

1 ವರ್ಷದಲ್ಲಿ 12 ಬಾರಿ ದೆಹಲಿ ಪ್ರವಾಸ; ಸಂತೋಷ ಕೂಟಕ್ಕೆ ಸಂತೋಷಪಡಿಸುವ ಬೊಮ್ಮಾಯಿ ಪ್ರಯತ್ನ ವಿಫಲ; ಸಿಎಂ ಬದಲಾವಣೆ ಬಗ್ಗೆ ಮತ್ತೆ ಪ್ರಸ್ತಾಪಿಸಿದ ಕಾಂಗ್ರೆಸ್

Spread the love

ಬೆಂಗಳೂರು: ಸಿಎಂ ಬದಲಾವಣೆ ಕುರಿತು ರಾಜ್ಯ ಕಾಂಗ್ರೆಸ್ ಘಟಕ ನಿನ್ನೆ ಮಾಡಿದ್ದ ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿರುವಾಗಲೇ ಕಾಂಗ್ರೆಸ್ ಮತ್ತೆ ಸಿಎಂ ಬದಲಾವಣೆ ಟ್ವೀಟ್ ಮಾಡಿದೆ. ಬಿಜೆಪಿ ಹೈಕಮಾಂಡ್ ಗೆ ಕರ್ನಾಟಕದ ಸಿಎಂಗಳೆಂದರೆ ಗೊಂಬೆಗಳಿದ್ದಂತೆ ಎಂದು ಲೇವಡಿ ಮಾಡಿದೆ.

 

ಬಿ.ಎಸ್.ಯಡಿಯೂರಪ್ಪ ಅವರನ್ನು ಸರ್ಕಾರದ ಎರಡನೇ ವರ್ಷದ ವಾರ್ಷಿಕೋತ್ಸವದ ಸಂಭ್ರಮದ ಸಂದರ್ಭದಲ್ಲೇ ಕಣ್ಣೀರು ಹಾಕಿಸಿ ಕಳಿಸಲಾಗಿತ್ತು. ಈಗ ಬೊಮ್ಮಾಯಿ ಅವರನ್ನು 1ನೇ ವಾರ್ಷಿಕೋತ್ಸವದ ಹೊತ್ತಲ್ಲಿ ಕೆಳಗಿಳಿಸುವ ವೇದಿಕೆ ಸಜ್ಜಾಗುತ್ತಿದೆ. 1 ವರ್ಷದಲ್ಲಿ 12 ಬಾರಿ ದೆಹಲಿ ಪ್ರವಾಸ ಕೈಗೊಂಡರೂ PuppetCM ಗೆ ಸಂಪುಟ ಸಂಕಟ ಬಗೆಹರಿಸಲಾಗದ್ದೇ ಇದಕ್ಕೆ ಸಾಕ್ಷಿ! ಎಂದು ರಾಜ್ಯ ಕಾಂಗ್ರೆಸ್ ಘಟಕ ವ್ಯಂಗ್ಯವಾಡಿದೆ.

ಬಿಜೆಪಿ ಹೈಕಮಾಂಡಿಗೆ ಕರ್ನಾಟಕದ ಸಿಎಂಗಳೆಂದರೆ PuppetCM ಇದ್ದಹಾಗೆ, ಅಡಿಸಿಯೂ ನೋಡುತ್ತಾರೆ, ಬೀಳಿಸಿಯೂ ನೋಡುತ್ತಾರೆ! ಬಿ.ಎಸ್.ಯಡಿಯೂರಪ್ಪ ಅವರಂತಹ ನಾಯಕರನ್ನೇ ಹೇಳದೆ ಕೇಳದೆ ಮನೆಗೆ ಕಳಿಸಿರುವಾಗ ಬೋಂಬೆ ಬೊಮ್ಮಾಯಿ ಅವರು ಯಾವ ಲೆಕ್ಕ! ‘ಸಂತೋಷ ಕೂಟ’ಕ್ಕೆ ಸಂತೋಷಪಡಿಸುವ ಬೊಮ್ಮಾಯಿಯವರ ಪ್ರಯತ್ನ ವಿಫಲವಾಗಿದೆ. ಹಗರಣ ಮತ್ತು ವೈಫಲ್ಯಗಳ ಕೊಡ ತುಂಬಿದೆ ಎಂದು ಸರಣಿ ಟ್ವೀಟ್ ಮೂಲಕ ಮತ್ತೆ ಕಿಡಿ ಹೊತ್ತಿಸಿದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ