ಬೆಂಗಳೂರು: ನಾಯಕತ್ವ ಬದಲಾವಣೆ ಕುರಿತಾದ ಯಾವುದೇ ವದಂತಿಗೆ ತಲೆಕೆಡಿಸಿಕೊಳ್ಳದೆ ನಿಮ್ಮ ಕೆಲಸ ಮುಂದುವರಿಸಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ವರಿಷ್ಠರು ಅಭಯ ನೀಡಿದ್ದಾರೆಂದು ಮೂಲಗಳು ಹೇಳಿವೆ. ಜತೆಗೆ ಇಂಥ ಸುಳ್ಳುಸುದ್ದಿ ಹಬ್ಬಿಸುವವರ ಪತ್ತೆಗೆ ಸೂಕ್ತ ಕ್ರಮ ಕೈಗೊಂಡು ವರದಿ ಸಲ್ಲಿಸು ವಂತೆಯೂ ಸೂಚಿಸಿದ್ದಾರೆ ಎನ್ನಲಾಗಿದೆ.
ಬುಧವಾರವೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಹಿತ ಪ್ರಮುಖ ನಾಯಕರು ಮತ್ತು ಸಚಿವರು ಸಿಎಂ ಬೊಮ್ಮಾಯಿ ಪರ ನಿಂತಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸೂಚನೆ ಮೇರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಿಎಂ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ, ಊಹಾ ಪೋಹಗಳಿಗೆ ಧೃತಿ ಗೆಡದೆ ಉತ್ತಮ ಕೆಲಸ ಮಾಡುವಂತೆ ಸೂಚಿಸಿದ್ದಾರೆನ್ನಲಾಗಿದೆ.
ಸಿಎಂ ಬದಲಾವಣೆ ಬಗ್ಗೆ ಪಕ್ಷ ಆಲೋಚಿಸಿಲ್ಲ. ಮುಂದಿನವಿಧಾನಸಭೆ ಚುನಾವಣೆಯನ್ನು ಬೊಮ್ಮಾಯಿ ನೇತೃ ತ್ವದಲ್ಲೇ ಎದುರಿಸುವುದಾಗಿ ವರಿಷ್ಠರು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ನಾಯಕತ್ವ ಬದ
ಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.
Laxmi News 24×7