Home / ರಾಜಕೀಯ / ಮಳೆಯಿಂದಾದ ಹಾನಿ ಸಮೀಕ್ಷೆಗೆ ವಾರದ ಗಡುವು,ನೀಡಿದ ಸಚಿವ ಉಮೇಶ ಕತ್ತಿ

ಮಳೆಯಿಂದಾದ ಹಾನಿ ಸಮೀಕ್ಷೆಗೆ ವಾರದ ಗಡುವು,ನೀಡಿದ ಸಚಿವ ಉಮೇಶ ಕತ್ತಿ

Spread the love

ನೈಸರ್ಗಿಕ ವಿಕೋಪ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಉಮೇಶ ಕತ್ತಿ ಅವರು ಇಂದು ಜಿಲ್ಲೆಯ ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ ಚರ್ಚಿಸಿದರು.

ಈ ವೇಳೆ ಮಾತನಾಡಿದ ಸಚಿವರು, ತೀವ್ರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬೆಳೆ ಹಾನಿ, ವಸತಿ ಹಾನಿ, ಶಾಲಾ ಕಟ್ಟಡ ಹಾನಿ ಸೇರಿದಂತೆ ಆಗಿರುವ ಇನ್ನೀತರ ಹಾನಿಯ ಬಗ್ಗೆ ಕಂದಾಯ, ಕೃಷಿ, ತೋಟಗಾರಿಕೆ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಸಮಗ್ರ ವರದಿ ಸಲ್ಲಿಸಬೇಕು ಎಂದು ಒಂದು ವಾರದ ಗಡುವು ವಿದಿಸಿದರು. ಮಳೆಯಿಂದಾಗಿ ಬೆಳೆ ಹಾನಿ ಅನುಭವಿಸಿದ ರೈತರಿಗೆ ಅನ್ಯಾಯವಾಗಬಾರದು. ಹೀಗಾಗಿ ಬೆಳೆನಷ್ಠ ಅನುಭವಿಸಿದ ರೈತರಿಗೆ ಪರಿಹಾರಕ್ಕೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಈಗ ಜಿಲ್ಲೆಯಲ್ಲಿ ಸಮೃದ್ಧ ಮಳೆಯಾಗಿದೆ. ಬಿತ್ತನೆ ಮಾಡುವ ರೈತರಿಗೆ ಬೀಜದ ಕೊರತೆಯಾಗದಂತೆ ನೋಡಿಕೊಳ್ಳಬೇಕು, ಕೊರತೆ ಇರುವ ಬೀಜಗಳ ದಾಸ್ತಾನಿಗೆ ಗಮನ ಹರಿಸಬೇಕು. ರೈತರ ಬೇಡಿಕೆಯಂತೆ ಕಡಲೇ ಮತ್ತು ತೊಗರಿ ಬೀಜಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹಿಸಬೇಕು ಎಂದು ಸಚಿವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇನ್ನೂ ವಿಜಯಪುರ ತಾಲೂಕಿನಲ್ಲಿ ಒಟ್ಟು 99 ಮನೆಗಳಿಗೆ ಹಾನಿಯಾಗಿತ್ತು.

 

ಈ ಪೈಕಿ ಈಗಾಗಲೇ 78 ಮನೆಗಳಿಗೆ ನಿಯಮಾನುಸಾರ ಪರಿಹಾರ ಕಲ್ಪಿಸಲಾಗಿದೆ. 17 ಮನೆಗಳಿಗೆ ಪರಿಹಾರ ಕೊಡುವುದು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸಭೆಗೆ ತಿಳಿಸಿದರು. ಯಾವುದೇ ಮನೆಗಳು ಬಿಟ್ಟು ಹೋಗದಂತೆ ಸರ್ವೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಸೋಮನಗೌಡ ಬಿ ಪಾಟೀಲ ಸಾಸನೂರ, ಜಿಲ್ಲಾ ಪಂಚಾಯತ್ ಸಿಇಓ ರಾಹುಲ್‌ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೆಚ್.ಡಿ.ಆನಂದಕುಮಾರ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಹಾಗೂ ಇತರರು ಇದ್ದರು. ಇದೇ ವೇಳೆ ಮಾತನಾಡಿದ ಸಚಿವ ಉಮೇಶ ಕತ್ತಿ ಜೂನ್ 1ರಿಂದ ಆಗಸ್ಟ್ 9 ರವರೆಗೆ 16 ಜಾನುವಾರು ಮೃತಪಟ್ಟಿದ್ದು ಸಣ್ಣ ಜಾನುವಾರುಗಳಿಗೆ 3000 ರೂ ಮತ್ತು ದೊಡ್ಡ ಜಾನುವಾರುಗಳಿಗೆ 25,000 ಮತ್ತು 35,000 ರೂ ಸೇರಿ ಇದುವರೆಗೆ 2.64 ಲಕ್ಷ ರೂ ಪರಿಹಾರ ಧನ ವಿತರಿಸಲಾಗಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ