Breaking News

2022-23 ನೇ ಸಾಲಿನ ಆರಾಧನಾ ಕಾರ್ಯಕ್ರಮಕ್ಕಾಗಿ 49.74 ಕೋಟಿ ರೂಪಾಯಿಗಳ ಅನುದಾನ

Spread the love

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡ, ಲಂಬಾಣಿ ತಾಂಡಾ, ವಡ್ಡರ ಕೇರಿ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗಗಳು ವಾಸವಿರುವ ಸ್ಥಳಗಳಲ್ಲಿನ ದೇವಾಲಯ, ಪೂಜಾ ಮಂದಿರ, ಹಾಗೂ ಪ್ರಾರ್ಥನಾ ಮಂದಿರಗಳ ದುರಸ್ತಿ, ಜೀರ್ಣೋದ್ಧಾರ ಹಾಗೂ ನವ ನಿರ್ಮಾಣಗಳ ಯೋಜನೆಗೆ ಸಂಬಂಧಿಸಿದ ಆರಾಧನಾ ಯೋಜನೆಗೆ ಮುಜರಾಯಿ ಇಲಾಖೆಯಿಂದ ಪ್ರಸ್ತುತ 2022-23 ನೇ ಸಾಲಿನಲ್ಲಿ 49.74 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

 

ಈ ಬಗ್ಗೆ ಮಾಧ್ಯಮ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು, 19.09.2011 ರ ಸರಕಾರದ ಆದೇಶದಲ್ಲಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯ ಮಾರ್ಗಸೂಚಿಗಳ ಅನ್ವಯ2022-23 ನೇ ಸಾಲಿನ ಆರಾಧನಾ ಕಾರ್ಯಕ್ರಮಕ್ಕಾಗಿ ವಿಧಾನಸಭಾ ಕ್ಷೇತ್ರವಾರು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಜನ ಸಂಖ್ಯೆ ಆಧಾರದಲ್ಲಿ ಎಸ್‌.ಸಿ.ಪಿ ಯಡಿಯಲ್ಲಿ ರೂ. 19.38 ಕೋಟಿ ಹಾಗೂ ಟಿ.ಎಸ್‌.ಪಿ ಯೋಜನೆಯಡಿ ರೂ. 30.36 ಕೋಟಿ ಒಟ್ಟಾರೆ 49.74 ಕೋಟಿಗಳ ಅನುದಾನವನ್ನು ವಿಧಾನಸಭಾ ಕ್ಷೇತ್ರಗಳ ಸಂಖ್ಯೆಯ ಆಧಾರದಲ್ಲಿ 31 ಜಿಲ್ಲೆಗಳಿಗೂ ಬಿಡುಗಡೆ ಮಾಡಲಾಗಿದೆ.


Spread the love

About Laxminews 24x7

Check Also

ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Spread the love ಬೆಳಗಾವಿ: ಚಿಕ್ಕೋಡಿ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಪ್ಯಾಲಿಸ್ತೀನ್ ಧ್ವಜ ಹಾರಾಡಿದ್ದು, ಕೂಡಲೇ ಪೊಲೀಸರು ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ