ಬೆಂಗಳೂರು: ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಚನ್ನಪಟ್ಡಣದ ಸಮಾಜ ಸೇವಕರೊಬ್ಬರ ಜೊತೆಗೆ ಮಾತನಾಡಿದ್ದಾರೆ ಎನ್ನಲಾದ ದೂರವಾಣಿ ಸಂಭಾಷಣೆ ಇದೀಗ ಚರ್ಚೆಗೆ ಗ್ರಾಸವಾಗಿದೆ. ದೂರವಾಣಿ ಸಂಭಾಷಣೆಯಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಸಚಿವರು ಅಸಮಾಧಾನ ಹೊರಹಾಕಿದ್ದಾರೆ ಎನ್ನುವ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಸಚಿವ ಮಾಧುಸ್ವಾಮಿಯವರದ್ದು ಎನ್ನಲಾದ ಈ ದೂರವಾಣಿ ಸಂಭಾಷಣೆಯನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಸರ್ಕಾರದ ನಿಷ್ಕ್ರೀಯತೆ, ಸಚಿವರುಗಳ ಅಸಾಮರ್ಥ್ಯ, ರೈತರಿಗೆ ಎಸಗುತ್ತಿರುವ ಅನ್ಯಾಯಗಳು ಸಚಿವ ಮಾಧುಸ್ವಾಮಿಯವರಿಂದ ಬಯಲಾಗಿದೆ. ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿರುವುದು ಭ್ರಷ್ಟಾಚಾರದ ಮ್ಯಾನೇಜ್ಮೆಂಟ್ ಮಾತ್ರ. ಬೊಮ್ಮಾಯಿ ಅವರ ನಿಷ್ಕ್ರಿಯ ಆಡಳಿತಕ್ಕೆ, ರೈತರಿಗಾಗುತ್ತಿರುವ ಅನ್ಯಾಯಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ? ಎಂದು ಪ್ರಶ್ನಿಸಿದೆ.
Laxmi News 24×7