Breaking News

ಮಾಜಿ ಶಾಸಕ ಡಾ.ವಿಶ್ವನಾಥ್ ಪಾಟೀಲ್ ಅವರ ನೇತೃತ್ವದಲ್ಲಿ ಬೃಹತ್ ತಿರಂಗಾ ಬೈಕ್ ರ್ಯಾಲಿ

Spread the love

ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ಯ ಕಾಡಾ ಅಧ್ಯಕ್ಷ, ಮಾಜಿ ಶಾಸಕ ಡಾ.ವಿಶ್ವನಾಥ್ ಪಾಟೀಲ್ ಅವರ ನೇತೃತ್ವದಲ್ಲಿ ಬೃಹತ್ ತಿರಂಗಾ ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು.

ಬೈಲಹೊಂಗಲ ತಾಲೂಕಿನ ಬೆಳವಡಿಯಲ್ಲಿ ಭಾರತ ಮಾತೆಯ ಭಾವಚಿತ್ರ ಹಾಗೂ ವೀರರಾಣಿ ಮಲ್ಲಮ್ಮಾಜಿ ಪುತ್ಥಳಿಗೆ ಗೌರವ ಸಲ್ಲಿಸುವುದರೊಂದಿಗೆ ಈ ಬೃಹತ್ ಬೈಕ್ ರ್ಯಾಲಿಗೆ ಡಾ.ವಿಶ್ವನಾಥ್ ಪಾಟೀಲ್ ಅವರು ಚಾಲನೆ ನೀಡಿದರು.

ಬೆಳವಡಿಯಿಂದ ಕೆಂಗಾನೂರ, ಅರವಳ್ಳಿ, ಜಾಲಿಕೊಪ್ಪ, ನಯಾನಗರ, ಆನಿಗೋಳ ಮಾರ್ಗವಾಗಿ ಬೈಲಹೊಂಗಲ ಪಟ್ಟಣದ ವೀರರಾಣಿ ಚನ್ನಮ್ಮಾಜಿ ವೃತ್ತದವರೆಗೂ ಈ ತಿರಂಗಾ ರ್ಯಾಲಿ ನಡೆಯಿತು. ರ್ಯಾಲಿಯುದ್ದಕ್ಕೂ ವಂದೇ ಮಾತರಂ, ಭಾರತ್ ಮಾತಾಕಿ ಜೈ ಘೋಷಣೆಗಳು ಮುಗಿಲು ಮುಟ್ಟಿದ್ದವು. ಪ್ರತಿಯೊಬ್ಬರ ಬೈಕ್‍ಗಳ ಮುಂದೆ ಹಾಗೂ ಕೈಗಳಲ್ಲಿ ತ್ರಿವರ್ಣ ಧ್ವಜಗಳು ರಾರಾಜಿಸುತ್ತಿದ್ದವು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ