ಹಾವೇರಿ: ಈಗಿರುವ ಕಾಂಗ್ರೆಸ್ಸಿನವರು ಒರಿಜಿನಲ್ ಕಾಂಗ್ರೆಸ್ಸಿಗರಲ್ಲ. ಈಗಿನ ಕಾಂಗ್ರೆಸ್‌ಗೂ ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿದ್ದ ಕಾಂಗ್ರೆಸ್‌ಗೂ ಸಂಬಂಧವಿಲ್ಲ. ಈಗಿರುವುದು ಡೂಪ್ಲಿಕೇಟ್ ಕಾಂಗ್ರೆಸ್ ಮತ್ತು ಈಗಿನವರು ನಕಲಿ ಗಾಂಧಿಗಳು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.
ಕಾಂಗ್ರೆಸ್ ಪಕ್ಷದಿಂದಲೇ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂಬ ಕಾಂಗ್ರೆಸ್ ಮುಖಂಡರ ಹೇಳಿಕೆಗೆ ಶಿಗ್ಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು, ಇದರಲ್ಲೂ ಕಾಂಗ್ರೆಸ್‌ನವರು ರಾಜಕೀಯ ಮಾಡಬಾರದಿತ್ತು. ಕಾಂಗ್ರೆಸ್, ಅನೇಕ ಸಂಘಟನೆಗಳು, ಕ್ರಾಂತಿಕಾರಿಗಳ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯಸಿಕ್ಕಿದೆ. ಅಂದಿನ ಹೋರಾಟವನ್ನು ನಮ್ಮ ಹೋರಾಟ ಎಂದು ಕ್ಲೇಮ್ ಮಾಡಿಕೊಳ್ಳಲು ಇವರಿಗೆ ಯಾವುದೇ ನೈತಿಕತೆಯಿಲ್ಲ. ಇದರಲ್ಲಿ ಭ್ರಷ್ಟರು, ದೇಶಕ್ಕೆ ಸುಳ್ಳು ಹೇಳಿರುವವರು ಬಂದಿದ್ದಾರೆ. ಇದೊಂದು ನಕಲಿ ಕಾಂಗ್ರೆಸ್ ಮತ್ತು ನಕಲಿ ಗಾಂಧಿಗಳ ಪಾರ್ಟಿ ಎಂದರು.
ಬ
Laxmi News 24×7