Breaking News

ಸಿಎಂ ಇತಿಹಾಸದ ಸತ್ಯ ಎತ್ತಿ ಹಿಡಿಯಲಿ: ಡಿಕೆ ಶಿವಕುಮಾರ್‌

Spread the love

ಬೆಂಗಳೂರು: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಸರ್ಕಾರ ಪ್ರತಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ದೇಶದ ಪ್ರಥಮ ಪ್ರಧಾನಿ ನೆಹರೂ ಅವರನ್ನು ಕಡೆಗಣಿಸಿದ್ದು, ಆಗಿರುವ ಪ್ರಮಾದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ಷಮೆಯಾಚಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ.

 

ಈ ಬಗ್ಗೆ ಭಾನುವಾರ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ದೇಶ ಸ್ವಾತಂತ್ರ್ಯ ಹೋರಾಟ ಮತ್ತು ನವಭಾರತ ನಿರ್ಮಾಣದಲ್ಲಿ ನೆಹರು ಅವರ ಪಾತ್ರ ಬಹಳ ಹಿರಿದು. ಇದು ನಿಮಗೂ ಗೊತ್ತಿದೆ. ಈ ಇತಿಹಾಸ ಓದಿಯೇ ನಾವು-ನೀವು ಬೆಳೆದಿದ್ದೇವೆ. ಆದರೂ, ರಾಜಕೀಯ ಕಾರಣಕ್ಕೆ ನೀವು ಇಂತಹ ಕ್ಷುಲ್ಲಕ ಕೆಲಸಕ್ಕೆ ಕೈ ಹಾಕಬಾರದಿತ್ತು ಇದು ಅಕ್ಷಮ್ಯ. ನೀವು ಇತಿಹಾಸದ ಸತ್ಯವನ್ನು ಎತ್ತಿ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ

Spread the loveಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ  ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ