Breaking News

ರಾಷ್ಟ್ರಧ್ವಜ ನೀತಿ ಸಂಹಿತೆ ತಿದ್ದುಪಡಿ ಮಾಡಿ ಪಾಲಿಸ್ಟರ್ ಧ್ವಜಕ್ಕೆ ಅನುಮತಿ ನೀಡಲಾಗಿತ್ತು. ಆದರೆ ಇದನ್ನೇ ಕಾಂಗ್ರೆಸ್ ತೀವ್ರವಾಗಿ ವಿರೋಧಿಸುತ್ತಿದ್ದಾರೆ

Spread the love

ನಗರದ ನೆಹರು ಮೈದಾನದಲ್ಲಿ ತಾಲೂಕ ಆಡಳಿತ ದಿಂದ ೭೬ ನೇ ಸ್ವಾತಂತ್ರ್ಯಮಹೋತ್ಸವನ್ನು ಸೋಮವಾರ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ನಗರ ತಹಶೀಲ್ದಾರ ಶಶಿಧರ ಮಾಡ್ಯಾಳ ಅವರು ಧ್ವಜಾರೋಹಣ ನೆರವೇರಿಸಿದರು.

ನಂತರ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್
ಮಹಾತ್ಮಾಗಾಂಧಿ ಅವರು ಖಾದಿ ಬಗ್ಗೆ ಕನಸು ಕಂಡಿದ್ದರು. ಅದನ್ನು ನೆನಸು ಮಾಡುವ ಕೆಲಸ ನರೇಂದ್ರ ಮೋದಿ ಮಾಡುತ್ತಿದ್ದಾರೆ. ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹೆಚ್ಚು ರಾಷ್ಟ್ರಧ್ವಜಗಳ ಅವಶ್ಯಕತೆ ಹಿನ್ನೆಲೆಯಲ್ಲಿ ರಾಷ್ಟ್ರಧ್ವಜ ನೀತಿ ಸಂಹಿತೆ ತಿದ್ದುಪಡಿ ಮಾಡಿ ಪಾಲಿಸ್ಟರ್ ಧ್ವಜಕ್ಕೆ ಅನುಮತಿ ನೀಡಲಾಗಿತ್ತು.

ಆದರೆ ಇದನ್ನೇ ಕಾಂಗ್ರೆಸ್ ತೀವ್ರವಾಗಿ ವಿರೋಧಿಸುತ್ತಿದ್ದಾರೆ ಎಂದರು.ಸರ್ಕಾರದ ಅಂಕಿಅಂಶಗಳ ಪ್ರಕಾರ 2004 ರಲ್ಲಿ ಖಾದಿ ಕ್ಷೇತ್ರದಲ್ಲಿ ವಹಿವಾಟು 914 ಕೋಟಿ ಇತ್ತು. ಅದೇ 2015-18 ರ ಕಾಲದಲ್ಲಿ ಮೂರು ಪಟ್ಟು ಹೆಚ್ಚಗಿದಡ. ಇದೀಗ 1828 ಕೋಟಿ ಖಾದಿ ವಹಿವಾಟು ನಡೆಯುತ್ತಿದೆ.

ಇಲ್ಲಿನ ಬೆಂಗೇರಿ ಖಾದಿ ಗ್ರಾಮ ಕೂಡಾ ಈ ಬಾರಿ 5 ಕೋಟಿಗೂ ಅಧಿಕ ವಹಿವಾಟು ನಡೆಸಿದೆ‌. ಇದು ಹಿಂದಿಗಿಂತಲೂ ಹೆಚ್ಚಿನ ವಹಿವಾಟು ಮಾಡಿದ ಸಾಧನೆಯಾಗಿದೆ. ಈ ಹಿನ್ನೆಲೆಯಲ್ಲಿ ದೇಶ ಬದಲಾವಣೆ ಆಗತ್ತಾ ಇದೆ. ಪ್ರಧಾನಿ ನರೇಂದ್ರ ಮೋದಿ ಅವರ ಕೈಗಳನ್ನು ಗಟ್ಟಿ ಮಾಡುವ ಕೆಲಸ ಎಲ್ಲರೂ ಮಾಡಬೇಕೆಂದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ನಂಬರ್ ಒನ್ ಆಗತ್ತಾ ಇದೆ. ಮುಂದಿನ ಕೆಲವು ವರ್ಷಗಳಲ್ಲಿ ಭಾರತ ಸೂಪರ್ ಪವರ್ ಆಗತ್ತಾ ಇದೆ. ಈಗಾಗಲೇ ನರೇಂದ್ರ ಮೋದಿ ಅವರ ನಾಯಕತ್ವವನ್ನು ಜಗತ್ತು ಕೊಂಡಾಡುತ್ತಿದೆ.

ನರೇಂದ್ರ ಮೋದಿ ಅವರು ಕರೆ ಕೊಟ್ಟ ಹರ ಘರ್ ತಿರಂಗಾ ಅಭಿಯಾನಕ್ಕೆ ಈಗಾಗಲೇ ದೇಶದಲ್ಲಿ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಇದು ರೋಮಾಂಚಕಗೊಳಿಸಿದೆ. ಆದರೆ ಕಾಂಗ್ರೆಸ್ ನವರು ಟೀಕೆ ಮಾಡಲು ವಿಷಯಗಳಿಲ್ಲದೇ ವಿನಾಕಾರಣ ಟೀಕೆ ಮಾಡುತ್ತಾ ಇದ್ದಾರೆ ಎಂದು ಶೆಟ್ಟರ್ ತಿಳಿಸಿದರು.


Spread the love

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ