Breaking News

ಚಿವರು ಎಚ್ಚರಿಕೆಯಿಂದ ಮಾತಾಡಲಿ: ಸಿ.ಟಿ.ರವಿ

Spread the love

ಸರಕಾರ ಮತ್ತು ಪಕ್ಷದ ವರ್ಚಸ್ಸು ಹೆಚ್ಚಿಸುವ ಜವಾಬ್ದಾರಿ ಹಿರಿಯ ಸಚಿವರ ಮೇಲಿದೆ. ನಮ್ಮ ಬದ್ಧತೆ ರಾಜ್ಯದ ಜನತೆಗೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಸಚಿವರು ಎಚ್ಚರಿಕೆಯಿಂದ ಮಾತನಾಡಬೇಕೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದರು.

 

ಸುದ್ದಿಗೋಷ್ಠಿಯಲ್ಲಿ ಎಸ್‌.ಟಿ. ಸೋಮಶೇಖರ್‌ ಸಹಿತ ಯಾವುದೇ ಸಚಿವರು ಬಾಲಿಶವಾಗಿ ಮಾತನಾಡಿ ಸಮಾಜಕ್ಕೆ ತಪ್ಪು ಸಂದೇಶ ಹೋಗುವಂತೆ ಮಾಡಬಾರದು. ಟಿಪ್ಪು ಬ್ಯಾನರ್‌ ಹರಿದವರನ್ನು ಮತ್ತು ಶಿವಮೊಗ್ಗದಲ್ಲಿ ಸಾವರ್ಕರ್‌ ಫೋಟೋ ತೆಗೆಸಿ ಅವಮಾನಿಸಿದವರನ್ನು ಪೊಲೀಸರು ಬಂಧಿಸುತ್ತಿದ್ದಾರೆ. ಇಂಥ ವಿಚಾರಗಳಲ್ಲಿ ಸರಕಾರ ಇನ್ನಷ್ಟು ಬಿಗಿಯಾಗಬೇಕು.

ಮೂರು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಜನಪ್ರತಿನಿಧಿಗಳು ಧ್ವಜಾರೋಹಣ ಮಾಡಿದ್ದಾರೆ. ಧ್ವಜ ಸಂಹಿತೆಯಲ್ಲಿ ಸಚಿವರು ಇಲ್ಲದಿರುವಾಗ ಧ್ವಜಾರೋಹಣ ಮಾಡುವ ಅಧಿಕಾರ ಅಧಿಕಾರಿಗಳಿಗೆ ನೀಡಿದ್ದಾರೆ.

ಶಾಸಕರು ಧ್ವಜಾರೋಹಣ ಮಾಡಲು ಧ್ವಜ ಸಂಹಿತೆಯಲ್ಲಿ ಬದಲಾವಣೆ ಆಗದ ಹೊರತು ಸಾಧ್ಯವಿಲ್ಲ. ಸಂಸದರು ಮತ್ತು ಶಾಸಕರು ಧ್ವಜಾರೋಹಣ ಮಾಡಬೇಕೆಂಬ ಚರ್ಚೆ ಬಹಳ ಕಾಲದಿಂದಿದೆ. ಧ್ವಜ ಸಂಹಿತೆಯಲ್ಲಿ ತಿದ್ದುಪಡಿಯಾಗುವ ತನಕ ಅದು ಸಾಧ್ಯವಿಲ್ಲ ಎಂದರು


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ