ನವದೆಹಲಿ: ಒಂದಲ್ಲ ಎರಡಲ್ಲ ಬರೋಬ್ಬರಿ 5 ಕೋಟಿ ತಿರಂಗ ಸೆಲ್ಫಿ! ಇದು ಕೇಂದ್ರ ಸಂಸ್ಕೃತಿ ಸಚಿವಾಲಯವೇ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ.
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ದೇಶಾದ್ಯಂತ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸಿ, ಅದರ ಜತೆಗೆ ಸೆಲ್ಫಿ ತೆಗೆದುಕೊಂಡು ಹರ್‌ಘರ್ ತಿರಂಗ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ಮನವಿ ಮಾಡಲಾಗಿತ್ತು.
ಅದಕ್ಕೆ ಉತ್ತಮ ಪ್ರತಿಕ್ರಿಯೆಗಳು ಬಂದಿವೆ.
ಸೋಮವಾರ ಸಂಜೆ 4ಗಂಟೆ ವೇಳೆಗೆ 5 ಕೋಟಿಗೂ ಹೆಚ್ಚು ತಿರಂಗ ಸೆಲ್ಫಿಗಳನ್ನು ಜನರು ಅಪ್‌ಲೋಡ್ ಮಾಡಿದ್ದಾರೆ. ಸರ್ಕಾರದ ಮನವಿಗೆ ಸ್ಪಂದಿಸಿದ ಎಲ್ಲರಿಗೂ ಅಭಿನಂದನೆಗಳು ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ.ಕಿಶನ್ ರೆಡ್ಡಿ ಹೇಳಿದ್ದಾರೆ.
Laxmi News 24×7