Breaking News

ರೈತರಿಂದ ಸಾವಿರಾರು ಎಕರೆ ಭೂಮಿಯನ್ನು ವಶಪಡಿಸಿಕೊಂಡಿತ್ತು.

Spread the love

ಬಳ್ಳಾರಿ: ಕೈಗಾರಿಕೆಗಳನ್ನು ನಿರ್ಮಾಣ ಮಾಡುವ ಉದ್ದೇಶದಿಂದ ಸರ್ಕಾರ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ರೈತರ ಸಾವಿರಾರು ಎಕರೆ ಭೂಮಿ ವಶಪಡಿಸಿಕೊಂಡಿತ್ತು. ಕೆಐಎಡಿಬಿ ಮೂಲಕ ವಶಪಡಿಸಿಕೊಂಡ ಭೂಮಿಯಲ್ಲಿ ಇದುವರೆಗೆ ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ. ಹೀಗಾಗಿ ಇತ್ತ ಉದ್ಯೋಗವಿಲ್ಲದೇ ಅತ್ತ ಭೂಮಿಯೂ ಇಲ್ಲದೆ ರೈತರು ಪರದಾಡುತ್ತಿದ್ದಾರೆ.

ಬಳ್ಳಾರಿ ತಾಲೂಕಿನ ಕುಡುತಿನಿ, ವೇಣಿವೀರಾಪುರ, ಕೊಳಗಲ್ಲು ಗ್ರಾಮಗಳಲ್ಲಿ ಬ್ರಹ್ಮಿಣಿ ಸ್ಟಿಲ್ ಹಾಗೂ ಮಿತ್ತಲ್ ಕಂಪನಿಗಾಗಿ ರೈತರಿಂದ ಸುಮಾರು 10 ಸಾವಿರ ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಂಡಿತ್ತು. ಇತ್ತ ರೈತರು ತಮ್ಮ ಕುಟುಂಬಕ್ಕೆ ಉದ್ಯೋಗ ಸಿಗಬಹುದು ಅನ್ನೋ ಕಾರಣಕ್ಕೆ ಕಡಿಮೆ ದರದಲ್ಲಿಯೇ ಭೂಮಿ ನೀಡಿದ್ದಾರೆ. ಇದಕ್ಕೆ ಕೆಲ ರೈತರು ವಿರೋಧ ವ್ಯಕ್ತಪಡಿಸಿ ನ್ಯಾಯಾಲಯದ ಮೂಲಕ ಕಾನೂನು ಹೋರಾಟ ಮಾಡುತ್ತಲೇ ಇದ್ದಾರೆ. ಆದ್ರೆ ಇಲ್ಲಿಯತನಕ ಸ್ವಾಧೀನಪಡಿಸಿಕೊಂಡ ಭೂಮಿಯಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ.

 


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ