Breaking News

ಬೆಳಗಾವಿ ಸಂಬಂಧಿಕರ ಮನೆಗೆ ಬಂದಿದ್ದ ಯುವತಿ ನಾಪತ್ತೆ

Spread the love

ಬೆಳಗಾವಿ: ಹೊರಗೆ ಹೋಗಿ ಬರುವುದಾಗಿ ಮನೆಯಿಂದ ಹೊರಟ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಇಲ್ಲಿನ ರೈತಗಲ್ಲಿಯಲ್ಲಿ ನಡೆದಿದೆ. ಮೂಲತಃ ಬೆಂಗಳೂರಿನ ಆನೇಕಲ್ ತಾಲೂಕಿನ ಜಿಗಣಿ ಗ್ರಾಮದ ನಿವಾಸಿ ಜ್ಯೋತಿ ಹಿಕ್ಕಡಿ(20) ನಾಪತ್ತೆಯಾದ ಯುವತಿ ಎಂದು ತಿಳಿದು ಬಂದಿದೆ.

ವಿಜಯಪುರ ಜಿಲ್ಲೆಯ ಮಾದಾಪಟ್ಟಣದಲ್ಲಿ ಜ್ಯೋತಿ ಅವರ ತಂದೆ ಶ್ರೀಶೈಲ ಹಿಕ್ಕಡಿ ವಾಸವಾಗಿದ್ದರು. ಕಳೆದ ಹದಿನೈದು ದಿನಗಳ ಹಿಂದೆಯಷ್ಟೇ ಬೆಳಗಾವಿ‌ ನಗರದ ರೈತ ಗಲ್ಲಿಯಲ್ಲಿ ತಮ್ಮ ಸಂಬಂಧಿಕರ‌ ಮನೆಗೆ ಬಂದಿದ್ದ ಯುವತಿ, ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದಾರೆ ಎಂದು ಯುವತಿ ತಂದೆ ಹೇಳಿದ್ದಾರೆ. ಈ ಸಂಬಂಧ ಶಾಹಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ