Breaking News

ಬಿಜೆಪಿ ಸಂಸದೀಯ ಮಂಡಳಿ‌ ಸದಸ್ಯರಾಗಿ ಬಿ ಎಸ್ ಯಡಿಯೂರಪ್ಪ ನೇಮಕಕ್ಕೆ ಸಿಎಂ ಬಸವರಾಜ ಬೊಮ್ಮಾಯಿ‌ ಸಂತಸ

Spread the love

ಬೆಂಗಳೂರು: ನಿಕಟ ಪೂರ್ವ ಮುಖ್ಯಮಂತ್ರಿ ಹಾಗೂ ರೈತ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಭಾರತೀಯ ಜನತಾ ಪಾರ್ಟಿ ಸಂಸದೀಯ ಮಂಡಳಿ ಸಭೆಯ ಸದಸ್ಯರಾಗಿರುವುದಕ್ಕೆ ಅತೀವ ಸಂತೋಷವಾಗಿದೆ. ಬಿಜೆಪಿಯ ಅತ್ಯಂತ ಉನ್ನತ ಎನಿಸಿರುವ ಸಂಸದೀಯ ಮಂಡಳಿಗೆ ಅವರನ್ನು ನೇಮಕ ಮಾಡುವ ಮೂಲಕ ಪಕ್ಷ ಅವರಿಗೆ ಅತಿ ದೊಡ್ಡ ಗೌರವದ ಸ್ಥಾನ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹರ್ಷ ವ್ಯಕ್ತಪಡಿಸಿದ್ದಾರೆ.

 

ಯಡಿಯೂರಪ್ಪ ಅವರ ನೇಮಕಾತಿ ಆದೇಶ ಹೊರ ಬರುತ್ತಿದ್ದಂತೆಯೆ ಸಿಎಂ ಅವರು ಕರೆ ಮಾಡಿ ಶುಭ ಕೋರಿದರು.

 

ತಾವು ಈ ಹುದ್ದೆಗೆ ಏರಿರುವುದರಿಂದ ಕರ್ನಾಟಕ ಬಿಜೆಪಿಗೆ ಆನೆ ಬಲ ಬಂದಂತಾಗಿದೆ. ಕರ್ನಾಟಕ‌ ಬಿಜೆಪಿಗೆ ಅಭೂತಪೂರ್ವ ಬೆಂಬಲ ಸಿಕ್ಕಂತಾಗಿದೆ. 2023 ರಲ್ಲಿ ರಾಜ್ಯ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ನಿಶ್ಚಿತ. ತಮ್ಮನ್ನು ಈ ಉನ್ನತ ಹುದ್ದೆಗೆ ನೇಮಕ ಮಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಹಾಗೂ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರಿಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ” ಎಂದು ಅವರು ಸಂದೇಶದಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?: ಸಿಎಂ

Spread the loveಮಂಗಳೂರು: “ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?. ನಾವು (ಕಾಂಗ್ರೆಸ್​) ಪಾದಯಾತ್ರೆ ಮಾಡಿರುವುದು ನಿರ್ದಿಷ್ಟ ಕಾರಣಕ್ಕೋಸ್ಕರ” …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ