Breaking News

. ರಾಜ್‌ ಕುಮಾರ್‌ ಅವರ ಕುಟುಂಬಸ್ಥರು ಭೇಟಿ ಮಾಡಿ ಸಿಎಂ ಬೊಮ್ಮಾಯಿ

Spread the love

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ವರನಟ ಡಾ. ರಾಜ್‌ ಕುಮಾರ್‌ ಅವರ ಕುಟುಂಬಸ್ಥರು ಭೇಟಿ ಮಾಡಿ ರಾಜ್‌ ಕುಮಾರ್‌, ಪುನೀತ್‌ ರಾಜ್‌ ಕುಮಾರ್‌, ಮತ್ತು ಪಾರ್ವತಮ್ಮ ರಾಜ್‌ ಕುಮಾರ್‌ ಅವರ ಸಮಾಧಿ ಸ್ಥಳಗಳನ್ನು ಅಭಿವೃದ್ಧಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ.

 

ಸಿಎಂ ಅಧಿಕೃತ ನಿವಾಸ ರೇಸ್‌ ಕೋರ್ಸ್‌ ರಸ್ತೆಯಲ್ಲಿರುವ ಮನೆಗೆ ಭೇಟಿ ನೀಡಿದ ರಾಜ್‌ ಕುಟುಂಬದ ಸದಸ್ಯರಾದ ರಾಘವೇಂದ್ರ ರಾಜ್‌ ಕುಮಾರ್‌, ಅಶ್ವಿನಿಪುನೀತ್‌ ರಾಜ್‌ಕುಮಾರ್‌ ಮತ್ತು ಧಿರೇನ್‌ ರಾಮ್‌ ಕುಮಾರ್ ಅವರು ಮಾತನಾಡಿ ಕಂಠೀರವ ಸ್ಟುಡಿಯೋದಲ್ಲಿರುವ ರಾಜ್‌ ಕುಮಾರ್‌, ಪುನೀತ್‌ ರಾಜ್‌ ಕುಮಾರ್‌, ಮತ್ತು ಪಾರ್ವತಮ್ಮ ರಾಜ್‌ ಕುಮಾರ್‌ ಅವರ ಸಮಾಧಿ ಸ್ಥಳಗಳನ್ನು ಅಭಿವೃದ್ಧಿ ಮಾಡುವ ವಿಚಾರವಾಗಿ ಮಾತನಾಡಿದರು. ಬಳಿಕ ಸಿಎಂ ಬೊಮ್ಮಾಯಿ ಅವರು ರಾಜ್‌ ಕುಟುಂಬದವರು ಸಿದ್ದಪಡಿಸಿದ ಪಿಪಿಟಿ ಯನ್ನು ವೀಕ್ಷಣೆ ಮಾಡಿದರು. ಪಿಡಬ್ಯ್ಲೂಡಿ ಇಲಾಖೆಯಿಂದ ಯೋಜನೆಯ ಅಂದಾಜು ಮೊತ್ತವನ್ನು ತರಿಸಲು ಸೂಚನೆ ನೀಡಿದರು.


Spread the love

About Laxminews 24x7

Check Also

ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?: ಸಿಎಂ

Spread the loveಮಂಗಳೂರು: “ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?. ನಾವು (ಕಾಂಗ್ರೆಸ್​) ಪಾದಯಾತ್ರೆ ಮಾಡಿರುವುದು ನಿರ್ದಿಷ್ಟ ಕಾರಣಕ್ಕೋಸ್ಕರ” …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ