Breaking News
Home / ಜಿಲ್ಲೆ / ಬೆಳಗಾವಿ / ಗ್ರಾಮ ಒನ್ ಗೆ ಇನ್ನಷ್ಟು ಸೇವೆ ಸೇರ್ಪಡೆ: C.M. ಬೊಮ್ಮಾಯಿ

ಗ್ರಾಮ ಒನ್ ಗೆ ಇನ್ನಷ್ಟು ಸೇವೆ ಸೇರ್ಪಡೆ: C.M. ಬೊಮ್ಮಾಯಿ

Spread the love

ಬೆಂಗಳೂರು: ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ನಾಗರಿಕ ಸೇವೆಗಳನ್ನು ಒದಗಿಸಲು ಪ್ರಾರಂಭಿಸಲಾಗಿರುವ ಗ್ರಾಮ ಒನ್ ಕೇಂದ್ರಗಳನ್ನು ಬಲಪಡಿಸಲು ಇನ್ನಷ್ಟು ಸೇವೆಗಳನ್ನು ಸೇರ್ಪಡೆಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಇ-ಆಡಳಿತ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಗ್ರಾಮ ಒನ್ ಕೇಂದ್ರಗಳ ಮೂಲಕ ಒದಗಿಸಬಹುದಾದ ಸೇವೆಗಳನ್ನು ಗುರುತಿಸಿ, ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಿ, ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ವಿವಿಧ ಜಿಲ್ಲೆಗಳಿಗೆ ವಿಶಿಷ್ಟವಾದ ಸೇವೆಗಳನ್ನು ಆಯಾ ಜಿಲ್ಲೆಗಳಿಗೆ ಸೀಮಿತಗೊಳಿಸಿ ಗ್ರಾಮ ಒನ್ ಕೇಂದ್ರಗಳಲ್ಲಿ ಒದಗಿಸಬೇಕು. ಜೊತೆಗೆ ಮೈಕ್ರೋ ಬ್ಯಾಂಕಿಂಗ್, ಎಲ್ ಪಿ ಜಿ ಬುಕಿಂಗ್ ಮತ್ತಿತರ ಕೆಲವು ಸೇವೆಗಳನ್ನು ಒದಗಿಸಲು ಅವಕಾಶ ಕಲ್ಪಿಸಬಹುದು ಎಂದು ತಿಳಿಸಿದರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಈ ವರೆಗೆ ಒಟ್ಟು 7274 ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, 2022ರ ಜನವರಿಯಲ್ಲಿ 65,520 ವ್ಯವಹಾರ (Transaction) ನಡೆದಿದ್ದು, ಜೂನ್ ತಿಂಗಳಲ್ಲಿ 10,36,542 ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಹೋಬಳಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಟಲ್ ಜನಸ್ನೇಹಿ ಕೇಂದ್ರಗಳ ಸೇವೆಯನ್ನು ಗ್ರಾಮ ಒನ್ ಮೂಲಕವೂ ಒದಗಿಸುವ ಬಗ್ಗೆ ಪ್ರಾಯೋಗಿಕವಾಗಿ ಕೆಲವು ಕೇಂದ್ರಗಳಲ್ಲಿ ಪ್ರಾರಂಭಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ರಾಜ್ಯದಲ್ಲಿ ಹೊಸ ಡಾಟಾ ಸೆಂಟರ್ ಪ್ರಾರಂಭಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಹೊಸ ಡಾಟಾ ಸೆಂಟರ್ ಸ್ಥಾಪನೆಗೆ ಸೂಕ್ತ ಸ್ಥಳ ನಿಗದಿಪಡಿಸುವಂತೆ  ಸೂಚಿಸಿದರಲ್ಲದೆ,  ಖಾಸಗಿ ಕಂಪೆನಿಗಳೂ ಡಾಟಾ ಸೆಂಟರ್ ಪ್ರಾರಂಭಿಸಲು ಮುಂದೆ ಬರುತ್ತಿದ್ದು, ಸರಕಾರವೂ ಇವುಗಳ ಸೇವೆ ಪಡೆದುಕೊಳ್ಳುವ ಬಗ್ಗೆ ಸೂಕ್ತ ನೀತಿಯನ್ನು ರೂಪಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

ಕೆ-ಜಿಐಎಸ್ ಅಡಿ ಲಭ್ಯವಿರುವ ಮಾಹಿತಿಗಳನ್ನು ತ್ವರಿತವಾಗಿ ಹಾಗೂ ನಿಖರವಾಗಿ ನಿರ್ಧಾರ ತೆಗೆದುಕೊಳ್ಳಲು ಆಧಾರವಾಗಿ ಬಳಸಿಕೊಳ್ಳಲು ಅವಕಾಶವಿದೆ. ವಿವಿಧ ಇಲಾಖೆಗಳು ಇವುಗಳ ಅನುಕೂಲ ಪಡೆಯಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ