Breaking News

ಮಾಸ್ಕ್ ಧರಿಸದಿದ್ದರೆ, ಸರಿಯಾಗಿ ವಿಲೇವಾರಿ ಮಾಡದಿದ್ದರೆ 1 ಸಾವಿರ ರೂ. ದಂಡ ಹಾಗೂ ಕೇಸ್

Spread the love

ಬೆಂಗಳೂರು: ಕೊರೊನಾ ಅವಾಂತರದ ಹಿನ್ನೆಲೆ ಮಾಸ್ಕ್ ಧರಿಸುವ ಕುರಿತು, ಎಲ್ಲೆಂದರಲ್ಲಿ ಉಗುಳುವ ಕುರಿತು ಈಗಾಗಲೇ ಹಲವು ರಾಜ್ಯಗಳಲ್ಲಿ ದಂಡ ಹಾಕಲಾಗುತ್ತಿದ್ದು, ಅದೇ ರೀತಿ ತಾಜ್ಯದಲ್ಲೂ ದಂಡ ಹಾಕಲು ಬಿಬಿಎಂಪಿ ನಿರ್ಧರಿಸಿದೆ.

ಬಿಬಿಎಂಪಿ ಕಮೀಷನರ್ ಅನಿಲ್ ಕುಮಾರ್  ಮಾಹಿತಿ ನೀಡಿದ್ದು, ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಬಿಬಿಎಂಪಿ ಈ ನಿರ್ಧಾರ ಕೈಗೊಂಡಿದ್ದು, ಶುಕ್ರವಾರದಿಂದಲೇ ದಂಡ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕವಾಗಿ ಮಾಸ್ಕ್ ಹಾಕದಿದ್ದರೆ, ಸಾರ್ವಜನಿಕ ಪ್ರದೇಶದಲ್ಲಿ ಉಗುಳಿದರೆ, ಎಲ್ಲೆಂದರಲ್ಲಿ ಮೂತ್ರ ವಿರ್ಸಜನೆ ಮಾಡಿದರೆ, ಮಾಸ್ಕ್ ವಿಲೇವಾರಿ ಸರಿಯಾಗಿ ಮಾಡದಿದ್ದರೆ ದಂಡ ಬೀಳುವುದು ಖಚಿತ. ಮುಲಾಜಿಲ್ಲದೆ ದಂಡ ವಿಧಿಸಲು ಬಿಬಿಎಂಪಿ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಶುಕ್ರವಾರದಿಂದಲೇ ಬಿಬಿಎಂಪಿ ತಂಡ ಫೀಲ್ಡಿಗೆ ಇಳಿಯುತ್ತಿದ್ದು, ರಸ್ತೆ ರಸ್ತೆಗಳಲ್ಲಿ ದಂಡ ಹಾಕಲು ಟೀಮ್ ಸಿದ್ಧವಾಗಿದೆ. ಈ ಕುರಿತು ಬಿಬಿಎಂಪಿ ಅಧಿಕೃತ ಆದೇಶ ಹೊರಡಿಸಲಿದೆ. ಯಾವ ತಪ್ಪಿಗೆ ಎಷ್ಟು ದಂಡ ಎಂಬುದರ ಕುರಿತು ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಲಾಗುತ್ತದೆ. ಶಿವಮೊಗ್ಗ ಪಾಲಿಕೆ ದಂಡ ಪ್ರಯೋಗದ ಬೆನ್ನಲ್ಲೇ ಬಿಬಿಎಂಪಿ ಎಚ್ಚೆತ್ತುಕೊಂಡಿದೆ.

ಮಾಸ್ಕ್ ಧರಿಸದಿದ್ದರೆ, ಸರಿಯಾಗಿ ವಿಲೇವಾರಿ ಮಾಡದಿದ್ದರೆ 1 ಸಾವಿರ ರೂ. ದಂಡ ಹಾಗೂ ಕೇಸ್ ದಾಖಲಿಸಲು ನಿರ್ಧರಿಸಲಾಗಿದೆ. ಪೊಲೀಸ್, ಬಿಬಿಎಂಪಿ ಮಾರ್ಷೆಲ್ ಹಾಗೂ ಬಿಬಿಎಂಪಿ ಹೆಲ್ತ್ ಇನ್ಸ್‍ಪೆಕ್ಟರ್ ಗಳಿಗೆ ದಂಡ ಹಾಕುವ ಅಧಿಕಾರಿ ನೀಡಲು ಚಿಂತಿಸಲಾಗಿದೆ. ದಂಡದ ಜೊತೆಗೆ ಕೇಸ್ ಕೂಡ ದಾಖಲಿಸಲು ನಿರ್ಧರಿಸಲಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ಪಬ್ಲಿಕ್ ಟಿವಿಗೆ ಮಾಹಿತಿನೀಡಿದ್ದಾರೆ.

ಈಗಾಗಲೇ ಶಿವಮೊಗ್ಗದಲ್ಲಿ ದಂಡ ಹಾಕಲಾಗುತ್ತಿದ್ದು, ಉಗಿದಿದ್ದಕ್ಕೆ, ಮಾಸ್ಕ್ ಹಾಕದ್ದಕ್ಕೆ ದಂಡ ಹಾಕಲಾಗಿದೆ. ರಸ್ತೆಯಲ್ಲಿ ಉಗುಳಿದ್ದಕ್ಕೆ 500 ರೂ., ಮಾಸ್ಕ್ ಬಳಸದ್ದಕ್ಕೆ 100 ರೂ. ದಂಡ ವಿಧಿಸಿದೆ.


Spread the love

About Laxminews 24x7

Check Also

ದೆಹಲಿಯಿಂದ ಲಿಸ್ಟ್ ಬಂದರೆ ಎಲ್ಲ ಬದಲಾಗಬೇಕು. ಮನೆ ಖಾಲಿ ಮಾಡಬೇಕ:ಸಚಿವ ಸತೀಶ್ ಜಾರಕಿಹೊಳಿ

Spread the loveರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ. ಬೆಳಗಾವಿ ಅಧಿವೇಶನದ ಬಳಿಕ ಸಂಪುಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ