Breaking News

ಅಕಾಲಿಕ ಮಳೆಯಾಗಲಿದೆ. ರೋಗ ರುಜಿನಗಳು ಕಾಣಿಸಿಕೊಳ್ಳಲಿವೆ : ಕೋಡಿಮಠದ ಶ್ರೀ

Spread the love

ನಾಡಿನಲ್ಲಿ ಹಿಂಗಾರು ಮಳೆ ಕಡಿಮೆಯಾಗಿ ಅಕಾಲಿಕ ಮಳೆಯಾಗಲಿದೆ. ರೋಗ ರುಜಿನಗಳು ಕಾಣಿಸಿಕೊಳ್ಳಲಿವೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಸೊರಬ ತಾಲೂಕಿನ ಜಡೆ ಸಂಸ್ಥಾನ ಮಠದ ಆವರಣದಲ್ಲಿ ಜೀಣೋರ್ದ್ಧಾರವಾಗುತ್ತಿರುವ ಶ್ರೀ ಕುಮಾರ ಕಂಪಿನ ಸಿದ್ಧವೃಷಭೇಂದ್ರ ಕತೃ ಗದ್ದುಗೆಯ ಶಿಲಾಮಯ ಕಟ್ಟಡದ ಕಾಮಗಾರಿಯನ್ನು ಬುಧವಾರ ವೀಕ್ಷಿಸಿ, ಕತೃ ಗದ್ದುಗೆಯ ದರ್ಶನ ಪಡೆದ ನಂತರ ಮಾತನಾಡಿದರು.

 

ಶುಭಕೃತ ನಾಮಸಂವತ್ಸರ ದೇಶದಲ್ಲಿ ಅಶುಭವನ್ನುಂಟು ಮಾಡಲಿದೆ. ಮಠದಲ್ಲಿ ಪಂಚಾಗ್ನಿ ಮಾಡುವ ಸಂದರ್ಭದಲ್ಲಿ ಅಗ್ನಿಕುಂಡ ಒಡೆದು ಗಾಯ ಮಾಡಿತು. ಪೂರ್ಣ ಪ್ರಮಾಣದಲ್ಲಿ ಪೂಜೆ ಸಲ್ಲಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ ನಾಡಿನಲ್ಲಿ ಬೆಂಕಿ ಅನಾಹುತ ಸಂಭವಿಸುವ ಲಕ್ಷಣವಿದೆ ಎಂದೆನಿಸುತ್ತದೆ. ಕಾರ್ತಿಕ ಮಾಸದಲ್ಲಿ ಪ್ರಾಕೃತಿಕ ವಿಕೋಪಗಳು ಹೆಚ್ಚಾಗಲಿದ್ದು, ಮುಂದಿನ ದಿನಗಳಲ್ಲಿ ರಾಜಕೀಯ ಪಕ್ಷಗಳು ಇಬ್ಭಾಗವಾಗುವ ಸಂಭವವಿದೆ. ಮತಾಂಧತೆಯಿಂದಾಗಿ ಧಾರ್ಮಿಕ ಸಂರ್ಷಗಳು ನಡೆಯುತ್ತಿದ್ದು ನೈಜ ಜ್ಞಾನದ ಕೊರತೆಯೇ ಕಾರಣ. ಮುಂದಿನ ದಿನಗಳಲ್ಲಿ ಮತ್ತಷ್ಟು ಉಲ್ಬಣಗೊಳ್ಳಲಿದೆ ಎಂದರು.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ