ನವದೆಹಲಿ: ಕರೋಲ್ ಬಾಗ್ ಪ್ರದೇಶದ ಪಿಜಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕುಡಿದ ಮತ್ತಿನಲ್ಲಿ ಬಾಲಕಿಯರಿಗೆ ಕಿರುಕುಳ ನೀಡಿದ ಮತ್ತು ಹಲ್ಲೆ ನಡೆಸಿದ ಆಘಾತಕಾರಿ ಘಟನೆ ರಾಷ್ಟ್ರ ರಾಜಧಾನಿಯಿಂದ ವರದಿಯಾಗಿದೆ. ಆಗಸ್ಟ್ 13 ರಂದು ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಘಟನೆಯ ನಂತರ ಸಂತ್ರಸ್ತೆ ಮರುದಿನ ಪಿಜಿ ಖಾಲಿ ಮಾಡಿದ್ದಾಳೆ. ವೀಡಿಯೋದಲ್ಲಿ ಭದ್ರತಾ ಸಿಬ್ಬಂದಿ ಮದ್ಯದ ಅಮಲಿನಲ್ಲಿ ಕಾರಿಡಾರ್ಗೆ ಧಾವಿಸುತ್ತಿದ್ದ ಹುಡುಗಿಯರನ್ನು ಎಳೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದಾಗಿದೆ.ದೆಹಲಿ ಪೊಲೀಸರು ಭದ್ರತಾ ಸಿಬ್ಬಂದಿಯ ವಿರುದ್ಧ ಬುಧವಾರ ಎಫ್ಐಆರ್ ದಾಖಲಿಸಿದ್ದಾರೆ. ಹುಡುಗಿಯರ ಮೇಲೆ ಹಲ್ಲೆ ನಡೆಸಿದ ಸೆಕ್ಯುರಿಟಿ ಗಾರ್ಡ್ ನ ಕೃತ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಮಂಗಳವಾರ ದೆಹಲಿ ಪೊಲೀಸರಿಗೆ ಪತ್ರ ಬರೆದು ಈ ವಿಷಯದಲ್ಲಿ ಏಕೆ ಕ್ರಮ ಕೈಗೊಂಡಿಲ್ಲ ಎಂಬ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೋರಿದ್ದಾರೆ. ಈ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸುವಂತೆ ಡಿಸಿಡಬ್ಲ್ಯೂ ದೆಹಲಿ
करोल बाग में चल रहे एक PG hostel में सिक्योरिटी गार्ड ने नशे की हालत में लड़कियों के साथ छेड़खानी और मारपीट की. हमें ट्विटर के जरिए शिकायत मिली, मामले की गंभीरता को देखते हुए पुलिस को नोटिस जारी किया है. मामले में कड़ी कार्यवाही सुनिश्चित करेंगे। pic.twitter.com/6smwjfqEJB
— Swati Maliwal (@SwatiJaiHind) August 16, 2022
Laxmi News 24×7