Breaking News

ನರೇಗಾ ಯೋಜನೆಯಡಿ ರೈತರ ತೋಟದ ರಸ್ತೆಗಳ ಸುಧಾರಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ*

Spread the love

ಗೋಕಾಕ : ರೈತರ ಜಮೀನುಗಳಿಗೆ ಹೋಗುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯು ಆದೇಶ ಹೊರಡಿಸಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಮಹಾತ್ಮಾ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಈ ತೋಟದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸೂಚಿಸಿದ್ದು, ಒಟ್ಟು ಕಾರ್ಮಿಕ ಆಯವ್ಯಯದ ಶೇ 25 ರ ಮಿತಿಗೆ ಒಳಪಟ್ಟು ರೈತರ ಜಮೀನುಗಳಿಗೆ ಹೋಗುವ ರಸ್ತೆಗಳನ್ನು ಸರ್ವಋತು ಸಂಪರ್ಕ ರಸ್ತೆಗಳಾಗಿ ಅಭಿವೃದ್ಧಿಪಡಿಸುವಂತೆ ಆದೇಶ ಹೊರಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

2022-23ನೇ ಸಾಲಿನ ಆಯವ್ಯಯ ಭಾಷಣದಲ್ಲಿ ರೈತರ ಜಮೀನುಗಳಿಗೆ ಹೋಗುವ ರಸ್ತೆಗಳನ್ನು ಆದ್ಯತೆಯ ಮೇರೆಗೆ ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಲು ಘೋಷಣೆ ಮಾಡಲಾಗಿದ್ದು, ಆರ್‌ಡಿಪಿಆರ್ ಆಯುಕ್ತರು ಬೆಳಗಾವಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.


Spread the love

About Laxminews 24x7

Check Also

ಪೋಕ್ಸೋ ಸಂತ್ರಸ್ತೆಯ ಹೆಸರು ಉಲ್ಲೇಖಿಸಿದ್ದಕ್ಕೆ ಕ್ಷಮೆ ಕೇಳಿದ ಶ್ರೀರಾಮುಲು

Spread the loveಬಳ್ಳಾರಿ: ಬ್ಯಾನರ್ ಗಲಭೆ ಖಂಡಿಸಿ ಜನವರಿ 17 ರಂದು ನಡೆದ ಬೃಹತ್ ಸಮಾವೇಶದಲ್ಲಿ ಪೋಕ್ಸೋ ಪ್ರಕರಣದ ಸಂತ್ರಸ್ತೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ